ನವದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ಮತ್ತೆ ವಿಸ್ತರಿಸಲಾಗಿದೆ. ದೇಶದ 80 ಕೋಟಿ ಜನರಿಗೆ ನವಂಬರ್ ವರೆಗೂ ಉಚಿತವಾಗಿ ಆಹಾರಧಾನ್ಯ ವಿತರಿಸಲಾಗುವುದು.
ದೇಶದ ಜನರನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ದೇಶದ ಬಡವರಿಗೆ ಅನುಕೂಲವಾಗುವಂತೆ ನವೆಂಬರ್ ವರೆಗೆ ಉಚಿತವಾಗಿ ರೇಷನ್ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಜೂನ್ 21 ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಕೇಂದ್ರ ಸರ್ಕಾರವೇ ರಾಜ್ಯಗಳಿಗೆ ಲಸಿಕೆ ಪೂರೈಕೆ ಮಾಡಲಿದೆ. ಲಸಿಕೆಯನ್ನು ಮುಂದಿನ ಎರಡು ವಾರದ ನಂತರ ರಾಜ್ಯಗಳಿಗೆ ಉಚಿತವಾಗಿ ಕೇಂದ್ರ ಸರ್ಕಾರವೇ ನೀಡಲಿದೆ ಎಂದು ಹೇಳಿದ್ದಾರೆ.
ಶೇಕಡ 25 ರಷ್ಟು ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳು ಖರೀದಿ ಮಾಡಬಹುದು. ಖಾಸಗಿ ಆಸ್ಪತ್ರೆಗಳಲ್ಲಿ 150 ರೂಪಾಯಿ ಮಾತ್ರ ಸೇವಾ ಶುಲ್ಕ ಪಡೆಯಬಹುದು. ಶೇಕಡ 75 ರಷ್ಟು ಲಸಿಕೆಯನ್ನು ಕೇಂದ್ರ ಸರ್ಕಾರ ಖರೀದಿಸಲಿದೆ. ಮೇ ಮೊದಲು ಇದ್ದ ವ್ಯವಸ್ಥೆ ಜಾರಿಯಾಗಲಿದೆ. ಕೇಂದ್ರ ಸರ್ಕಾರವೇ ಲಸಿಕೆ ಖರೀದಿ ಮಾಡಿ ರಾಜ್ಯಗಳಿಗೆ ನೀಡಲಿದೆ ಎಂದು ತಿಳಿಸಿದ್ದಾರೆ.