alex Certify ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡವರಿಗೆ ಗುಡ್ ನ್ಯೂಸ್: ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿಕೊಂಡವರಿಗೆ ಗುಡ್ ನ್ಯೂಸ್: ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಸರ್ಕಾರಿ ಜಾಗದಲ್ಲಿನ ಮನೆ ಸಕ್ರಮಕ್ಕೆ ಅರ್ಜಿ ಸಲ್ಲಿಕೆ ಅವಧಿಯನ್ನು 2022 ರ ಮಾರ್ಚ್ 31 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ರಾಜ್ಯದಲ್ಲಿ ನಗರ ಹಾಗೂ ಗ್ರಾಮಾಂತರ ಪ್ರದೇಶದ ಸರ್ಕಾರಿ ಜಮೀನುಗಳಲ್ಲಿ 2015 ರ ಜನವರಿ 1 ರ ಮೊದಲು ಅನಧಿಕೃತವಾಗಿ ನಿರ್ಮಿಸಿಕೊಂಡ ಮನೆಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.

ಸರ್ಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಕರ್ನಾಟಕ ಕಂದಾಯ ಕಾಯ್ದೆಯ ಕಲಂ 94 ಸಿ, 94 ಸಿಸಿ ಅನ್ವಯ ಅರ್ಜಿ ಸಲ್ಲಿಸಲು 2019 ರ ಮಾರ್ಚ್ 31 ರವರೆಗೆ ಅವಕಾಶ ನೀಡಲಾಗಿತ್ತು. ಅದನ್ನು ತಿದ್ದುಪಡಿ ಮಾಡಿ 2022 ರ ಮಾರ್ಚ್ 31 ರವರೆಗೆ ವಿಸ್ತರಿಸಲಾಗಿದೆ. ಬಹುತೇಕ ಅರ್ಜಿಗಳ ವಿಲೇವಾರಿಯಾಗಿದ್ದು, ಬಾಕಿ ಉಳಿದವರು ಸೌಲಭ್ಯ ಸದ್ಬಳಕೆ ಮಾಡಿಕೊಳ್ಳುವಂತೆ ಸಚಿವರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...