alex Certify BIG NEWS: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳ ಜೀವಾವಧಿ ಶಿಕ್ಷೆ ವಿಧಿಸಿ ಉಡುಪಿ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.

ಅಪರಾಧಿಗಳಾದ ಪತ್ನಿ ರಾಜೇಶ್ವರಿ ಶೆಟ್ಟಿ, ಪುತ್ರ ನವನೀತ್ ಶೆಟ್ಟಿ ಹಾಗೂ ಅರ್ಚಕ ನಿರಂಜನ್ ಭಟ್ ಅವರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.

ದುಬೈನಲ್ಲಿ ಉದ್ಯಮಿಯಾಗಿದ್ದ ಭಾಸ್ಕರ್ ಶೆಟ್ಟಿ ಅವರನ್ನು ಸ್ವಾರ್ಥಕ್ಕಾಗಿ ಪತ್ನಿ, ಮಗ ಹಾಗೂ ಅರ್ಚಕ ಮೂವರು ಸೇರಿ ಉಡುಪಿಯ ಅವರ ನಿವಾಸದಲ್ಲಿಯೇ 2016, ಜುಲೈ 16ರಂದು ಭೀಕರವಾಗಿ ಹತ್ಯೆ ಮಾಡಿದ್ದರು. ಸಾಕ್ಷ್ಯನಾಶಮಾಡಲೆಂದು ಭಾಸ್ಕರ್ ಶೆಟ್ಟಿ ಅವರನ್ನು ಹೋಮಕುಂಡದಲ್ಲಿ ಹಾಕಿ ಸುಟ್ಟುಹಾಕಲಾಗಿತ್ತು. ಬಳಿಕ ಅವರ ಅಸ್ಥಿಯನ್ನು ನದಿಯಲ್ಲಿ ವಿಸರ್ಜನೆ ಮಾಡಿದ್ದರು.

ತನಿಖೆ ಕೈಗೆತ್ತಿಕೊಂಡ ಪೊಲೀಸರು ಭಾಸ್ಕರ್ ಶೆಟ್ಟಿ ಮೂಳೆಗಳನ್ನು ಸಂಗ್ರಹಿಸಿ ಆರೋಪಿಗಳಾದ ಪತ್ನಿ, ಮಗನ ಡಿ ಎನ್ ಎ ಪರೀಕ್ಷೆ ನಡೆಸಿದ್ದರು ಇದು ಹತ್ಯೆಯ ಸುಳಿವು ನೀಡಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...