ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಮುಂದುವರೆದಿದ್ದು, ಜೂನ್ 10 ರಿಂದ 13 ರವರೆಗೆ ಮುಂಗಾರು ಚುರುಕುಗೊಳ್ಳಲಿದೆ. ಇದರಿಂದ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
5 ದಿನಗಳ ಹಿಂದೆಯೇ ಮುಂಗಾರು ರಾಜ್ಯಕ್ಕೆ ಪ್ರವೇಶಿಸಿದ್ದರೂ, ಎರಡು ದಿನಗಳ ನಂತರ ಅನೇಕ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಮುಖವಾಗಿದೆ. ಕರಾವಳಿಯ ಉತ್ತರಕನ್ನಡ, ದಕ್ಷಿಣಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜೂನ್ 10 ರಿಂದ 13 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನ ಆರ್ಭಟದೊಂದಿಗೆ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಈ ವಾರ ಒಣಹವೆ ಇರಲಿದೆ ಎಂದು ಹೇಳಲಾಗಿದೆ.