alex Certify BIG NEWS: ರಾಜಕೀಯ ಬಿಕ್ಕಟ್ಟು; ಸಿಎಂ ಕುರ್ಚಿ ಮೇಲೆ ಸೋಕಾಲ್ಡ್ ಹುಲಿ, ರಾಜಾ ಹುಲಿ ಸವಾರಿ; ಅಧಿಕಾರಕ್ಕಾಗಿ ಮತ್ತೊಂದು ಪಕ್ಷದಿಂದಲೂ ಪೈಪೋಟಿ; ಹೆಚ್.ಡಿ.ಕೆ. ಕಿಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜಕೀಯ ಬಿಕ್ಕಟ್ಟು; ಸಿಎಂ ಕುರ್ಚಿ ಮೇಲೆ ಸೋಕಾಲ್ಡ್ ಹುಲಿ, ರಾಜಾ ಹುಲಿ ಸವಾರಿ; ಅಧಿಕಾರಕ್ಕಾಗಿ ಮತ್ತೊಂದು ಪಕ್ಷದಿಂದಲೂ ಪೈಪೋಟಿ; ಹೆಚ್.ಡಿ.ಕೆ. ಕಿಡಿ

ನಾನು ರಾಜಕೀಯದಲ್ಲಿರುವವರೆಗೂ ಜಿಟಿಡಿಯನ್ನ ಜೆಡಿಎಸ್ ಗೆ ಸೇರಿಸಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ... - Just Kannada | Online Kannada News | Breaking Kannada News ...

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಬಿಕ್ಕಟ್ಟು ಎದುರಾಗಿದೆ. ಕೋವಿಡ್‌ ಅಟ್ಟಹಾಸ ಮೆರೆಯುತ್ತಿರುವ ಹೊತ್ತಿನಲ್ಲಿ, ಬ್ಲಾಕ್‌ ಫಂಗಸ್‌ ಎಂಬ ಭಯಾನಕ ರೋಗ ಜನರನ್ನು ಆಪೋಷನ ತೆಗೆದುಕೊಳ್ಳುತ್ತಿರುವ ಗಳಿಗೆಯಲ್ಲಿ, ಮಕ್ಕಳು ಪಿಡುಗಿಗೆ ಸಿಲುಕಲಿದ್ದಾರೆಂಬ ಎಚ್ಚರಿಕೆಗಳ ನಡುವಿನಲ್ಲಿ, ಕನ್ನಡದ ಅಸ್ಮಿತೆಗೆ ದಕ್ಕೆಯಾಗಿರುವ ಕಾಲಘಟ್ಟದಲ್ಲಿ. ನಾಯಕತ್ವ ಬದಲಾವಣೆ, ಅಧಿಕಾರಕ್ಕಾಗಿ ಕಿತ್ತಾಟ ಆರಂಭವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ರಾಜ್ಯ ಸಂದಿಗ್ಧತೆಗೆ ಸಿಲುಕಿರುವ ಈ ಹೊತ್ತಿನಲ್ಲಿ ಇದೆಂಥ ರಾಜಕೀಯ? ಈಗ ರಾಜ್ಯದ ಎದುರಿಗೆ ಇರುವುದು ನಾಯಕತ್ವದ ಪ್ರಶ್ನೆಯೋ? ಅಥವಾ ಜನರ ಹಿತದ ಪ್ರಶ್ನೆಯೋ? ರಾಜ್ಯದಲ್ಲಿ ಚಿತೆಗಳಿಗೆ ಹಚ್ಚಿದ ಜ್ವಾಲೆ ಇನ್ನೂ ಆರಿಲ್ಲ. ಅದು ಎಂದು ಆರುತ್ತದೆ ಎಂಬುದೇ ಯಾರಿಗೂ ತಿಳಿಯುತ್ತಿಲ್ಲ. ಇಂಥ ಸಂದರ್ಭದಲ್ಲಿ ಕ್ಷುಲ್ಲಕ ರಾಜಕಾರಣ ಅಗತ್ಯವಿದೆಯೇ ಎಂದು ಪ್ರಶ್ನಿಸಿದ್ದಾರೆ.

ಸೋನಂ ಜನ್ಮದಿನದಂದು ಬಾಲ್ಯದ ಫೋಟೋ ಶೇರ್​ ಮಾಡಿದ ತಂದೆ ಅನಿಲ್​ ಕಪೂರ್​

ಬಿ.ಎಸ್‌. ಯಡಿಯೂರಪ್ಪನವರು ತಾವು ಖರೀದಿಸಿ ತಂದ ಕುದುರೆಗಳ ಮೇಲೆ ತಾವೇ ಸವಾರಿ ಮಾಡಿದ್ದರೆ ಈ ಪರಿಸ್ಥಿತಿ ಬರುತ್ತಲೇ ಇರಲಿಲ್ಲ. ಅದರ ಬದಲಿಗೆ ಮಾಧ್ಯಮಗಳು ಬಣ್ಣಿಸುವ ‘ಸೋಕಾಲ್ಡ್‌ ಹುಲಿ, ಬಾಹುಬಲಿ‘ ಮುಂತಾದವರನ್ನು ಮುಖ್ಯಮಂತ್ರಿ ಸೀಟಿನ ಮೇಲೆ ಕೂರಿಸಿದ್ದೇ ಸದ್ಯದ ರಾಜಕೀಯ ದುಸ್ಥಿತಿಗೆ ಕಾರಣ. ಇದು ಯಡಿಯೂರಪ್ಪನವರ ಸ್ವಯಂಕೃತ ಅಪರಾಧ. ಇನ್ನೊಂದೆಡೆ,‘ಅನ್ನ ಹಳಸಿದೆ, * ಕಾದಿದೆ‘ ಎಂಬಂತೆ ರಾಜ್ಯದ ಮತ್ತೊಂದು ರಾಜಕೀಯ ಪಕ್ಷ ಕಾದು ಕುಳಿತಿದೆ. ರಾಜ್ಯದಲ್ಲಿ ಹೊತ್ತಿರುವ ಚಿತೆಗಳ ಬೆಂಕಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಬೆಂದು ಹೋದರೆ, ನಂತರದ ದಿನಗಳಲ್ಲಿ ತನ್ನನ್ನು ಅಧಿಕಾರದಲ್ಲಿ ಪ್ರತಿಷ್ಠಾಪಿಸಿಕೊಳ್ಳಲು ಆ ರಾಷ್ಟ್ರೀಯ ಪಕ್ಷ ಪ್ರಯತ್ನಗಳನ್ನು ಪೈಪೋಟಿಗೆ ಬಿದ್ದು ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಸಂಕಷ್ಟದ ಕಾಲದಲ್ಲಿ ಬಿಜೆಪಿಯಲ್ಲಿ ಉಂಟಾಗಿರುವ ಅಧಿಕಾರದ ಲಾಲಸೆ, ಅದನ್ನು ಬಳಸಿಕೊಂಡು ಅಧಿಕಾರಕ್ಕೆ ಬರಲು ಕೋವಿಡ್‌ ನಿಯಮಗಳನ್ನೆಲ್ಲ ಮೀರಿ ಬೀದಿಗೆ ಬಿದ್ದಿರುವ ಕಾಂಗ್ರೆಸ್‌ ಪಕ್ಷಗಳೆರಡೂ ಆತ್ಮಾವಲೋಕನೆ ಮಾಡಿಕೊಳ್ಳಬೇಕು ಎಂದು ಚಾಟಿ ಬೀಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...