ಕೊರೊನಾ ಸಂಕಷ್ಟದ ಮಧ್ಯೆ ಕೇಂದ್ರ ಸರ್ಕಾರ ಮಹತ್ವ ನಿರ್ಧಾರ ತೆಗೆದುಕೊಂಡಿದೆ. ಕೊರೊನಾದ ಎರಡನೇ ಅಲೆಯಿಂದ ಪ್ರಭಾವಿತರಾದ ಭಾರತ ಸರ್ಕಾರದ ವಿವಿಧ ಸಚಿವಾಲಯಗಳಲ್ಲಿ ಕೆಲಸ ಮಾಡುವ ಗುತ್ತಿಗೆ ನೌಕರರಿಗೆ ನೆಮ್ಮದಿ ಸುದ್ದಿ ಸಿಕ್ಕಿದೆ.
ಏಪ್ರಿಲ್ 1 ರಿಂದ ಜೂನ್ 30 ರ ವರೆಗೆ ಗುತ್ತಿಗೆ ನೌಕರರಿಗೆ ಪೂರ್ಣ ವೇತನವನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಲಾಕ್ ಡೌನ್ ಹಿನ್ನಲೆಯಲ್ಲಿ ಗುತ್ತಿಗೆ ನೌಕರರು ಮನೆಯಲ್ಲಿದ್ದರು. ಎಲ್ಲ ಸಚಿವಾಲಯಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಲಾಕ್ ಡೌನ್ ಹಿನ್ನಲೆಯಲ್ಲಿ ಮನೆಯಲ್ಲಿರುವ ಗುತ್ತಿಗೆದಾರ ನೌಕರರನ್ನೂ ಕರ್ತವ್ಯದಲ್ಲಿದ್ದವರೆಂದು ಪರಿಗಣಿಸುವಂತೆ ಸೂಚನೆ ನೀಡಲಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ಸಚಿವಾಲಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಅಧಿಕಾರಿಗಳ ಕೊರತೆಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳಿಗೆ ಪತ್ರವನ್ನು ಬರೆದಿದೆ. ಉಪ ಕಾರ್ಯದರ್ಶಿ, ನಿರ್ದೇಶಕ ಮತ್ತು ಜಂಟಿ ಕಾರ್ಯದರ್ಶಿ ಹಾಗೂ ಉನ್ನತ ಅಧಿಕಾರಿಗಳನ್ನು ಕೇಂದ್ರ ಡೆಪ್ಯುಟೇಷನ್‌ಗೆ ಶಿಫಾರಸು ಮಾಡಲು ಸೂಚಿಸಲಾಗಿದೆ. ಶೀಘ್ರದಲ್ಲೇ ಬಡ್ತಿ ಪಡೆಯಲಿರುವ ಅಧಿಕಾರಿಗಳ ಹೆಸರನ್ನು ಸೂಚಿಸದಂತೆ ಪತ್ರದಲ್ಲಿ ತಿಳಿಸಲಾಗಿದೆ.