ಬೆಂಗಳೂರು: ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೇ ರಾಜ್ಯದ ಜನತೆಗೆ ವಿದ್ಯುತ್ ಶಾಕ್ ನೀಡಲಾಗಿದೆ.
ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳಕ್ಕೆ ಸರ್ಕಾರ ಅನುಮೋದನೆ ನೀಡಿದೆ. ವಿದ್ಯುಚ್ಛಕ್ತಿ ಸರಬರಾಜು ದರದಲ್ಲಿ ಶೇಕಡ 3.84 ರಷ್ಟು ಹೆಚ್ಚಳ ಮಾಡಲಾಗಿದೆ. ಪ್ರತಿ ಯೂನಿಟ್ ಗೆ 1 ರೂಪಾಯಿ 35 ಪೈಸೆ ಹೆಚ್ಚಳಕ್ಕೆ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದ್ದು, 30 ಪೈಸೆ ದರ ಹೆಚ್ಚಳಕ್ಕೆ ಸರ್ಕಾರ ಅನುಮೋದನೆ ನೀಡಿದೆ ಎನ್ನಲಾಗಿದೆ.
2021 -22 ನೇ ಸಾಲಿನ ವಿದ್ಯುಚ್ಛಕ್ತಿ ದರಗಳನ್ನು ಪರಿಷ್ಕರಣೆ ಮಾಡಲಾಗಿದೆ. ವಿದ್ಯುತ್ ದರ ಏರಿಕೆ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿ ಒಂದು ಯೂನಿಟ್ ಗೆ 30 ಪೈಸೆ ದರ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ ಎಂದು ಹೇಳಲಾಗಿದೆ.