ಬೆಂಗಳೂರು: ಕೊರೋನಾ ಸೋಂಕು ತಡೆಗೆ ರಾಜ್ಯದಲ್ಲಿ ಜಾರಿ ಮಾಡಲಾದ ಲಾಕ್ಡೌನ್ ಹಂತಹಂತವಾಗಿ ತೆರವುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.
ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಹಂತ ಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 12 ಗಂಟೆ ವರೆಗೆ ಅವಕಾಶ ನೀಡಲಾಗುವುದು. ಕೈಗಾರಿಕೆ ಚಟುವಟಿಕೆಗಳಿಗೆ ಮತ್ತಷ್ಟು ಅವಕಾಶ ನೀಡಲಿದ್ದು, ಆಟೋ, ಟ್ಯಾಕ್ಸಿ, ಕ್ಯಾಬ್ ಗಳಿಗೆ ಷರತ್ತುಬದ್ಧ ಅನುಮತಿ ನೀಡಲಾಗುವುದು. ಶೇಕಡ 50 ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚಾರಕ್ಕೆ ಅವಕಾಶ ನೀಡಲಿದೆ. ಸಿನಿಮಾ ಮಂದಿರ, ಮಾಲ್, ಸಭೆ ಸಮಾರಂಭಗಳಿಗೆ ನಿರ್ಬಂಧ ಮುಂದುವರೆಯಲಿದ್ದು, ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರದ್ದು, ಪರಿಸ್ಥಿತಿಗೆ ಅನುಗುಣವಾಗಿ ತೀರ್ಮಾನಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಸೋಂಕು ಹೆಚ್ಚಾಗಿರುವುದರಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚನೆ ನೀಡಬಹುದಾದ ಸಾಧ್ಯತೆ ಇದೆ. ಮೇ 14 ರಂದು ಬೆಳಗ್ಗೆ 6 ಗಂಟೆಗೆ ಲಾಕ್ ಡೌನ್ ಅಂತ್ಯವಾಗಲಿದ್ದು, ಬಳಿಕ ಹಂತ ಹಂತವಾಗಿ ಅನ್ಲಾಕ್ ಶುರುವಾಗಲಿದೆ ಎಂದು ಹೇಳಲಾಗಿದೆ.