ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಒಂದೇ ದಿನದಲ್ಲಿ ಲಕ್ಷಾಂತರ ಜನರಲ್ಲಿ ಪತ್ತೆಯಾಗುತ್ತಿದ್ದ ವೈರಸ್ ಇದೀಗ ಗಣನೀಯವಾಗಿ ಕಡಿಮೆ ಸಂಖ್ಯೆಯಲ್ಲಿ ಪತ್ತೆಯಾಗುತ್ತಿರುವುದು ಕೊಂಚ ನೆಮ್ಮದಿಯ ವಿಚಾರ. ಆದರೆ ಸಾವಿನ ಸಂಖ್ಯೆ ಇಳಿಕೆಯಾಗದಿರುವುದು ಆತಂಕಕಾರಿಯಾಗಿದೆ.
ಕಳೆದ 24 ಗಂಟೆಯಲ್ಲಿ 91,702 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,92,74,823ಕ್ಕೆ ಏರಿಕೆಯಾಗಿದೆ.
ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 3,403 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,63,079ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 11,21,671 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,77,90,073 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,34,580 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ 24,60,85,649 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.