alex Certify BIG NEWS: ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅನ್ ಲಾಕ್ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಕೊರೊನಾ ಸೋಂಕು ಹೆಚ್ಚಿರುವ 11 ಜಿಲ್ಲೆಗಳಲ್ಲಿ ಜೂನ್ 14ರಿಂದ 21ರವರೆಗೆ ಲಾಕ್ ಡೌನ್ ವಿಸ್ತರಣೆಯಾಗಲಿದ್ದು, ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಅನ್ ಲಾಕ್ ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅನ್ ಲಾಕ್ ಕುರಿತ ಹೊಸ ಮಾರ್ಗಸೂಚಿ ಪ್ರಕಟಿಸಿದೆ.

ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಜಿಲ್ಲೆಗಳಲ್ಲಿ ಜೂನ್ 14ರಿಂದ ಅನ್ ಲಾಕ್ ಆರಂಭವಾಗಲಿದ್ದು, ರಾಜ್ಯಾದ್ಯಂತ ನೈಟ್ ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗುತ್ತಿದೆ. ಸಂಜೆ 7ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರಲಿದ್ದು, ಶುಕ್ರವಾರ ಸಂಜೆ 7ರಿಂದ ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರಲಿದೆ.

ಇನ್ನೂ 2 ವರ್ಷ ನಾನೇ ಸಿಎಂ; ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಬಿ.ಎಸ್.ವೈ.

ಹೊಸ ಮಾರ್ಗಸೂಚಿ ಪ್ರಮುಖಾಂಶಗಳು:

* ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಮಯ ವಿಸ್ತರಣೆ
* ಮಧ್ಯಾಹ್ನ 2 ಗಂಟೆಯವರೆಗೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ
* ಶೇ.50ರಷ್ಟು ಸಿಬ್ಬಂದಿ ಬಳಸಿ ಎಲ್ಲಾ ಕಾರ್ಖಾನೆಗಳು ಆರಂಭ
* ಗಾರ್ಮೆಂಟ್ಸ್ ಗಳಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಅವಕಾಶ
* ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ
* ಕಟ್ಟಡ ನಿರ್ಮಾಣ ಕಾಮಗಾರಿಗೆ ಅವಕಾಶ
* ಹೋಟೆಲ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ
* ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ, ಖಾಸಗಿ ಬಸ್ ಸಂಚಾರಕ್ಕೆ ನಿರ್ಬಂಧ
* ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಸಲು ಅವಕಾಶ
* ಬೆಂಗಳೂರಿನಲ್ಲಿ ಮೆಟ್ರೋ ಸಂಚಾರಕ್ಕೆ ನಿರ್ಬಂಧ
*ಮದುವೆಗಳಲ್ಲಿ 40 ಜನರಿಗೆ ಮಾತ್ರ ಭಾಗಿಯಾಗಲು ಅವಕಾಶ
* ಅಂತ್ಯಕ್ರಿಯೆಯಲ್ಲಿ 5 ಜನರಿಗೆ ಮಾತ್ರ ಅವಕಾಶ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...