ನವದೆಹಲಿ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ ತರುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಐದಾರು ಸಚಿವರಿಗೆ ಕೋಕ್ ನೀಡಿ, ಕೆಲ ಸಚಿವರನ್ನು ಬದಲಾವಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್, SIT ಎದುರು ನರೇಶ್, ಶ್ರವಣ್ ಹಾಜರು…?
ಪ್ರಧಾನಿ ಮೋದಿ ನೇತೃತ್ವದಲ್ಲಿ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ಬಿ.ಎಲ್. ಸಂತೋಷ್ ನಿನ್ನೆ ನಡೆಸಿದ ಪ್ರತ್ಯೇಕ ಸಭೆ ಬಳಿಕ ಇಂತದ್ದೊಂದು ಮಾತು ಕೇಳಿಬರುತ್ತಿದೆ. ಕೆಲ ಸಚಿವರ ಕಾರ್ಯಕ್ಷಮತೆ ಆಧಾರದಲ್ಲಿ ಸಂಪುಟದಿಂದ ಕೆಲವರನ್ನು ಕೈಬಿಟ್ಟು ಹೊಸ ಮುಖಗಳಿಗೆ ಸ್ಥಾನ ನೀಡುವ ಸಾಧ್ಯತೆಯಿದೆ.
70 ದಿನಗಳಲ್ಲಿ ಮೊದಲ ಬಾರಿಗೆ ಅತಿ ಕಡಿಮೆ ಸೋಂಕಿತರ ಸಂಖ್ಯೆ ದಾಖಲೆ; 24 ಗಂಟೆಯಲ್ಲಿ 84,332 ಜನರಲ್ಲಿ ಕೋವಿಡ್ ಪಾಸಿಟಿವ್; 1,21,311 ಜನರು ಡಿಸ್ಚಾರ್ಜ್
ಈ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ರಾಜ್ಯಗಳ ಸಂಸದರಿಗೆ ಸಂಪುಟದಲ್ಲಿ ಸ್ಥಾನ ನೀಡುವ ನಿಟ್ಟಿನಲ್ಲಿಯೂ ಚರ್ಚೆ ನಡೆದಿದೆ. ಕೊರೊನಾ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂಬ ವಿಪಕ್ಷ ನಾಯಕರ ಆರೋಪಕ್ಕೂ ಸಂಪುಟ ಸರ್ಜರಿ ಮೂಲಕ ತಿರುಗೇಟು ನೀಡಲು ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗಿದೆ.