ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಪದೆ ಪದೇ ಚಾಮರಾಜಪೇಟೆಗೆ ಭೇಟಿ ನೀಡುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಚಾಮರಾಜಪೇಟೆಯಿಂದ ಸ್ಪರ್ಧಿಸಲಿದ್ದಾರೆಯೇ ಎಂಬ ಚರ್ಚೆ ಆರಂಭವಾಗಿರುವ ನಡುವೆಯೇ ಶಾಸಕ ಜಮೀರ್ ಅಹ್ಮದ್, ಚಾಮರಾಜಪೇಟೆ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ವಿಪಕ್ಷನಾಯಕರಿಗೆ ಒತ್ತಾಯಿಸಿರುವ ಪ್ರಸಂಗ ನಡೆದಿದೆ.
‘ರಕ್ಷಕರನ್ನು ರಕ್ಷಿಸಿ’; ದೇಶಾದ್ಯಂತ ವೈದ್ಯರಿಂದ ಪ್ರತಿಭಟನೆಗೆ ನಿರ್ಧಾರ
ಜೆ.ಜೆ. ನಗರದಲ್ಲಿ ಪೌರಕಾರ್ಮಿಕರಿಗೆ ಫುಡ್ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಚಾಮರಾಜಪೇಟೆಯಿಂದ ಸ್ಪರ್ಧೆ ಬಗ್ಗೆ ಸ್ವತ: ಪ್ರಸ್ತಾಪಿಸಿ, ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧಿಸುತ್ತೀರೇ ಎಂದು ಹಲವರು ಪ್ರಶ್ನಿಸುತ್ತಿದ್ದಾರೆ. ಆದರೆ ನಾನು ಬಾದಾಮಿಯಿಂದ ಆಯ್ಕೆಯಾಗಿರುವ ಶಾಸಕ. ಹಾಗಾಗಿ ಬಾದಾಮಿ ಕ್ಷೇತ್ರದಿಂದಲೇ ಮತ್ತೊಮ್ಮೆ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.
ಪ್ರಧಾನಿ ಮೋದಿ, ಸಿಎಂ ಬಿ.ಎಸ್.ವೈ. ವಿರುದ್ಧ ಸಿದ್ದರಾಮಯ್ಯ ಆಕ್ರೋಶ; ಜನರ ಜೀವ ಹಿಂಡುವ ಇಂಥ ಸರ್ಕಾರ ಹಿಂದೆಂದೂ ನೋಡಿಲ್ಲ ಎಂದು ವಾಗ್ದಾಳಿ
ಇದೇ ವೇಳೆ ಮಧ್ಯಪ್ರವೇಶಿಸಿದ ಶಾಸಕ ಜಮೀರ್ ಅಹ್ಮದ್, ನೀವು ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು. ಇದು ಜನರ ಒತ್ತಾಸೆ ಕೂಡ ಆಗಿದೆ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಇದು ಜಮೀರ್ ಅಹ್ಮದ್ ಅವರ ಔದಾರ್ಯ. ಚಾಮರಾಜಪೇಟೆಯಿಂದ ಸ್ಪರ್ಧೆ ಬಗ್ಗೆ ಮುಂದಿನ ದಿನಗಳಲ್ಲಿ ನೋಡೋಣ ಎಂದು ಹೇಳಿದರು.