alex Certify ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರೆಯುವ ಬಗ್ಗೆ ಕೇಂದ್ರ ಸಚಿವ ಸದಾನಂದಗೌಡರಿಂದ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಡಿಯೂರಪ್ಪ ಸಿಎಂ ಸ್ಥಾನದಲ್ಲಿ ಮುಂದುವರೆಯುವ ಬಗ್ಗೆ ಕೇಂದ್ರ ಸಚಿವ ಸದಾನಂದಗೌಡರಿಂದ ಮಹತ್ವದ ಮಾಹಿತಿ

ಬೆಂಗಳೂರು: ಮುಂದಿನ ಎರಡು ವರ್ಷ ಯಡಿಯೂರಪ್ಪ ಮುಖ್ಯಮಂತ್ರಿ ಎಂಬುದರಲ್ಲಿ ಯಾವುದೇ ಸಂಶಯ ಬೇಡವೆಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಪ್ರತಿ ರಾಜ್ಯಕ್ಕೆ ಒಬ್ಬೊಬ್ಬ ಉಸ್ತುವಾರಿ ಇರುತ್ತಾರೆ. ಕೇಂದ್ರದ ವರಿಷ್ಠರು ನೀಡಿದ ಮಾಹಿತಿಯನ್ನು ರಾಜ್ಯಗಳಿಗೆ ಉಸ್ತುವಾರಿಗಳು ನೀಡುತ್ತಾರೆ. ಹಾಗಾಗಿಯೇ, ಉಸ್ತುವಾರಿ ಅರುಣ್ ಸಿಂಗ್ ಕೂಡ ಮಾಹಿತಿ ನೀಡಿದ್ದಾರೆ ಎಂದರು.

ಮುಂದಿನ ಎರಡು ವರ್ಷಗಳ ಕಾಲ ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೇ ಹೇಳಿದ್ದು, ವರಿಷ್ಠರು ಚರ್ಚೆ ಮಾಡಿಯೇ ಈ ಮಾತನ್ನು ಹೇಳಿಸಿದ್ದಾರೆ. ಹೀಗಾಗಿ ಯಾವುದೇ ಸಂಶಯ ಬೇಡ ಎಂದು ಸದಾನಂದಗೌಡ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...