ನವದೆಹಲಿ: ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿದ್ಯುರ್ ಚಾಲಿತ ದ್ವಿಚಕ್ರವಾಹನ ಸಬ್ಸಿಡಿ ಹೆಚ್ಚಳ ಮಾಡಲಾಗಿದೆ.
ಜನರಿಗೆ ಕೈಗೆಟುಕುವ ದರದಲ್ಲಿ ವಿದ್ಯುತ್ ಚಾಲಿತ ವಾಹನಗಳನ್ನು ಒದಗಿಸಲು ಕ್ರಮಕೈಗೊಂಡಿದ್ದು, ದ್ವಿಚಕ್ರ ವಾಹನಗಳ ಮೇಲಿನ ಸಬ್ಸಿಡಿಯನ್ನು ಶೇಕಡ 50 ರಷ್ಟು ಹೆಚ್ಚಳ ಮಾಡಲಾಗಿದೆ. ಫೇಮ್ -2 ಯೋಜನೆಯಲ್ಲಿ ಬದಲಾವಣೆ ಮಾಡಲಾಗಿದ್ದು, ಮೊದಲು ವಿದ್ಯುತ್ ಚಾಲಿತ ವಾಹನಗಳಿಗೆ ಲಿಥಿಯಂ ಐಯಾನ್ ಬ್ಯಾಟರಿಯ ಪ್ರತಿ ಕಿಲೋ ವ್ಯಾಟ್ ಪರ್ ಹವರ್ ಗೆ(per kWph) 10 ಸಾವಿರ ರೂ. ಸಬ್ಸಿಡಿ ನಿಗದಿಪಡಿಸಲಾಗಿತ್ತು. ಈಗ ದ್ವಿಚಕ್ರ ವಾಹನಗಳಿಗೆ ಪ್ರತಿ ಕಿಲೋ ವ್ಯಾಟ್ ಪರ್ ಹವರ್ ಗೆ 15 ಸಾವಿರ ರೂಪಾಯಿ ಸಬ್ಸಿಡಿ ನಿಗದಿಮಾಡಲಾಗಿದೆ.
ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳಿಗೆ ನೀಡುವ ಆರ್ಥಿಕ ಯೋಜನೆ ಮೊತ್ತವನ್ನು ವಾಹನಗಳ ಒಟ್ಟು ವೆಚ್ಚದಲ್ಲಿ ಶೇಕಡ 40 ಕ್ಕೆ ಹೆಚ್ಚಳ ಮಾಡಲಾಗಿದೆ. ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ಮಾರಾಟ ಬೆಳವಣಿಗೆ ಕಂಡಿದ್ದು, ಕೇಂದ್ರದ ಈ ನಿರ್ಧಾರದಿಂದ ಮಾರಾಟದಲ್ಲಿ ಇನ್ನಷ್ಟು ಹೆಚ್ಚಳವಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.