ಸ್ಯಾಂಡಲ್ ವುಡ್ ನ ಯುವ ನಟಿ ಶ್ರೀಲೀಲಾ ಇಂದು ತಮ್ಮ 20ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.’ಕಿಸ್’ ಹಾಗೂ ‘ಭರಾಟೆ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಶ್ರೀಲೀಲಾ ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ.
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ‘ಬೈ2 ಲವ್’ ಹಾಗೂ ‘ದುಬಾರಿ’ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ಈ ಗಿಳಿ ʼಐ ಲವ್ ಯೂʼ ಅನ್ನೋದನ್ನ ಕೇಳೋದೇ ಚೆಂದ
ನಟಿ ಶ್ರೀಲೀಲಾ ಕನ್ನಡ ಅಲ್ಲದೇ ತೆಲುಗು ಸಿನಿಮಾಗಳಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿತಾರೆಯರಿಂದ ಹಾಗೂ ಅವರ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.