alex Certify 5 ಸಾವಿರ ರೂ. ಲಾಕ್ ಡೌನ್ ಪರಿಹಾರ: ಸಚಿವ ಸಿ.ಪಿ. ಯೋಗೇಶ್ವರ್ ಮಾಹಿತಿ – ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳಿಗೆ ನೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5 ಸಾವಿರ ರೂ. ಲಾಕ್ ಡೌನ್ ಪರಿಹಾರ: ಸಚಿವ ಸಿ.ಪಿ. ಯೋಗೇಶ್ವರ್ ಮಾಹಿತಿ – ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳಿಗೆ ನೆರವು

ಬೆಂಗಳೂರು: ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಾಯಿತ ಪ್ರವಾಸಿ ಮಾರ್ಗದರ್ಶಿಗಳಿಗೆ ತಲಾ 5 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಸಚಿವರು, ಕೊರೋನಾ ಲಾಕ್ಡೌನ್ ನಿಂದ ಪ್ರವಾಸೋದ್ಯಮ ಕ್ಷೇತ್ರದ ಮೇಲೆ ಉಂಟಾಗಿರುವ ಪರಿಣಾಮಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಪ್ರವಾಸಿ ಗೈಡ್ ಗಳಿಗೆ 5,000 ರೂ. ಪರಿಹಾರ ನೀಡಲಾಗುವುದು. ಹೋಟೆಲ್ ಕಾರ್ಮಿಕರಿಗೆ ತಲಾ 3 ಸಾವಿರ ರೂಪಾಯಿ ಪರಿಹಾರ ನೀಡಲು ಆರ್ಥಿಕ ಇಲಾಖೆಯಲ್ಲಿ ಚರ್ಚೆ ನಡೆದಿದ್ದು, ಶೀಘ್ರವೇ ಸರ್ಕಾರಿ ಆದೇಶ ಹೊರಬೀಳುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ಪದಾಧಿಕಾರಿಗಳೊಂದಿಗೆ ಕೂಡ ಸಚಿವರು ಚರ್ಚೆ ನಡೆಸಿದ್ದು, ಪ್ರವಾಸೋದ್ಯಮ ವಾಹನಗಳ 6 ತಿಂಗಳ ತೆರಿಗೆ ಮನ್ನಾ ಮಾಡಬೇಕು. ಚಾಲಕರಿಗೆ 3000 ರೂಪಾಯಿ ಪರಿಹಾರ ಕೊಡಬೇಕೆಂಬ ಬೇಡಿಕೆ ಕೇಳಿಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...