ಬೆಂಗಳೂರು: ದ್ವಿತೀಯ ಪಿಯುಸಿ ಪ್ರವೇಶಕ್ಕೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ 2021 -22 ನೇ ಸಾಲಿನ ದ್ವಿತೀಯ ಪಿಯು ತರಗತಿಗಳ ಶೈಕ್ಷಣಿಕ ಚಟುವಟಿಕೆ ಆರಂಭಿಸಲು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಜುಲೈ 15 ರಿಂದ ದ್ವಿತೀಯ ಪಿಯುಸಿ ಆನ್ಲೈನ್ ತರಗತಿಗಳು ಆರಂಭವಾಗಲಿದೆ. ಜುಲೈ 15 ರಿಂದ ಆಗಸ್ಟ್ 15 ರ ವರೆಗೆ ದ್ವಿತೀಯ ಪಿಯುಸಿ ಪ್ರವೇಶಕ್ಕೆ ಅವಕಾಶ ಇರುತ್ತದೆ. ನಂತರದಲ್ಲಿ ದಂಡ ಶುಲ್ಕ ಪಾವತಿಸಿ ಪ್ರವೇಶ ಪಡೆಯಬೇಕಿದೆ.
2019 -20 ಮತ್ತು 2020 -21 ನೇ ಸಾಲಿಗೆ ನಿಗದಿಪಡಿಸಲಾದ ಶುಲ್ಕವನ್ನು ಪ್ರಥಮ ಮತ್ತು ದ್ವಿತೀಯ ಪಿಯು ಪ್ರವೇಶಕ್ಕೆ ಸಂಗ್ರಹಿಸುವಂತೆ ಸೂಚನೆ ನೀಡಲಾಗಿದೆ. ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದ ನಂತರ ಪ್ರಥಮ ಪಿಯು ಪ್ರವೇಶಕ್ಕೆ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.