ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಕ್ಲೈಮ್ಯಾಕ್ಸ್ ಹಂತ ತಲುಪಿರುವ ಬೆನ್ನಲ್ಲೇ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿಗೂ ಮುನ್ನ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಪ್ರಧಾನಿ ಮೋದಿ ದೆಹಲಿಯ ತಮ್ಮ ನಿವಾಸಕ್ಕೆ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ಕರೆಸಿಕೊಂಡು ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಕೆಲ ಸಚಿವರ, ಶಾಸಕರ ಅಸಮಾಧಾನ, ನಾಯಕತ್ವ ಬದಲಾವಣೆ ಮಟ್ಟದಲ್ಲಿನ ಚರ್ಚೆ ಬಗ್ಗೆಯೂ ಕೇಳಿದ್ದಾರೆ ಎನ್ನಲಾಗಿದೆ.
18 ವರ್ಷ ಮೇಲ್ಪಟ್ಟ ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಇಂದು ಮಧ್ಯಾಹ್ನ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಲಿದ್ದು, ಅರುಣ್ ಸಿಂಗ್ ಭೇಟಿಗೂ ಮೊದಲೇ ಡಿವಿಎಸ್ ರಿಂದ ಪ್ರಧಾನಿ ಮೋದಿ ಭೇಟಿಯಾಗಿ ಚರ್ಚೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.