ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಲ್ಲಿ ಇರುವ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ ಎಂಎಲ್ಸಿ ಹೆಚ್. ವಿಶ್ವನಾಥ್ ವಿರುದ್ಧ ಶಾಸಕ ಎಸ್.ಆರ್. ವಿಶ್ವನಾಥ್ ಕೆಂಡಕಾರಿದ್ದಾರೆ. ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಆಂತರಿಕ ಬಿಕ್ಕಟ್ಟು ಶಮನದ ವಿಚಾರವಾಗಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ರನ್ನ ಇಂದು ವಿಶ್ವನಾಥ್ ಭೇಟಿಯಾಗಿದ್ದರು.
ಸಿಎಂ ಯಡಿಯೂರಪ್ಪ ವಿರುದ್ಧ ಬಹಿರಂಗ ಹೇಳಿಕೆ ನೀಡಿದ ಹೆಚ್. ವಿಶ್ವನಾಥ್ ವಿರುದ್ಧ ಬೆಂಗಳೂರಿನಲ್ಲಿ ಕಿಡಿಕಾರಿದ ಶಾಸಕ ಎಸ್.ಆರ್. ವಿಶ್ವನಾಥ್, ಎಂಎಲ್ಸಿ ವಿಶ್ವನಾಥ್ಗೆ ರಾಜ್ಯದ ಸಿಎಂರನ್ನ ಆಯ್ಕೆ ಮಾಡುವ ಅವಕಾಶ ನೀಡಲಾಗಿಲ್ಲ. ನಮ್ಮ ಅಭಿಪ್ರಾಯ ಏನಿದೆ ಅದನ್ನಷ್ಟನ್ನೇ ಹೇಳಬೇಕು. ಅದನ್ನ ಬಿಟ್ಟು ಈ ರೀತಿಯ ಬಹಿರಂಗ ಹೇಳಿಕೆ ನೀಡೋದು ಪಕ್ಷದ ನಿಯಮಗಳ ಉಲ್ಲಂಘನೆಯಾಗುತ್ತದೆ.
ವಿಶ್ವನಾಥ್ ಉಂಡ ಮನೆಗೆ ದ್ರೋಹ ಬಗೀತಾರೆ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಈ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್ನಲ್ಲಿ ಇದ್ದಾಗಲೂ ಸಹ ವಿಶ್ವನಾಥ್ ಏನು ಮಾಡಿದ್ದಾರೆ ಅನ್ನೋದನ್ನ ಇತಿಹಾಸ ಹೇಳುತ್ತೆ. ವಿಶ್ವನಾಥ್ ರೋಡಲ್ಲಿ ಬಡಬಡಾಯಿಸುತ್ತಾ ತಿರುಗುವ ಅರೆಹುಚ್ಚನಂತಾಗಿದ್ದಾರೆ. ಅವರನ್ನ ಮೊದಲು ಸೂಕ್ತ ಚಿಕಿತ್ಸೆಗಾಗಿ ಮಾನಸಿಕ ರೋಗಿಗಳ ಆಸ್ಪತ್ರೆಗೆ ದಾಖಲು ಮಾಡಬೇಕು. ತಮಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂಬ ಹತಾಶೆಯಲ್ಲಿ ವಿಶ್ವನಾಥ್ ಈ ರೀತಿಯೆಲ್ಲ ಹೇಳಿಕೆ ನೀಡ್ತಿದ್ದಾರೆ ಎಂದು ಕಿಡಿಕಾರಿದ್ರು.