ಬೆಂಗಳೂರು: ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಈ ಬಗ್ಗೆ ನ್ಯಾಯಾಧೀಶರಿಂದ ತನಿಖೆಯಾಗಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂಗೆ ಒತ್ತಾಯಿಸಿದ್ದಾರೆ.
ಬೆಲ್ಲದ್ ಫೋನ್ ಯಾರೂ ಕದ್ದಾಲಿಕೆ ಮಾಡಿಲ್ಲ ಎಂದು ಸುಳ್ಳು ಹೇಳಿ ತಿಪ್ಪೆ ಸಾರಿಸುವ ಕೆಲಸ ಮಾಡಿ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆದಿದೆ. ಸ್ವತಃ ಬೆಲ್ಲದ್ ತನಗೆ ಯುವರಾಜ ಸ್ವಾಮಿ ಎಂಬಾತ ಕರೆ ಮಾಡಿದ್ದ, ಇದರ ಹಿಂದೆ ದೊಡ್ಡ ಪಿತೂರಿಯೇ ಇದೆ. ನನ್ನ ಫೋನ್ ಟ್ಯಾಪ್ ಆಗಿದೆ ಎಂದು ಸ್ಪೀಕರ್ ಕಾಗೇರಿ ಅವರಿಗೆ ಪತ್ರ ಬರೆದಿದ್ದಾರೆ. ಬೆಲ್ಲದ್ ಆರೋಪ ಗಂಭೀರವಾಗಿ ಪರಿಗಣಿಸಿ, ಹೈಕೋರ್ಟ್ ನ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
BIG NEWS: ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಕುಸಿತ; ಸರ್ಕಾರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ಸಿದ್ದರಾಮಯ್ಯ ಒತ್ತಾಯ
ಇದು ಕೇವಲ ಬೆಲ್ಲದ್ ಫೋನ್ ಗೆ ಮಾತ್ರ ಸಂಬಂಧಿಸಿದ್ದಾಗಿರಲಿಕ್ಕಿಲ್ಲ, ಬದಲಿಗೆ ರಾಜ್ಯ ಬಿಜೆಪಿಯ ಭಿನ್ನಮತೀಯರ ಶಾಸಕರ ಫೋನ್ ಕದ್ದಾಲಿಕೆ ಕೂಡ ಇರಬಹುದು. ಅಲ್ಲದೇ ವಿಪಕ್ಷದ ನಾಯಕರ ಫೋನ್ ಕದ್ದಾಲಿಕೆ ಸಾಧ್ಯತೆಯೂ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.