ಆಗ್ರಾ: ಉತ್ತರಪ್ರದೇಶದ ಮಧುರಾ ಜಿಲ್ಲೆಯ ಕೊಟ್ವಾಲಿ ನಗರ ಪ್ರದೇಶದ ಖಾಸಗಿ ಆಸ್ಪತ್ರೆಯಲ್ಲಿ ಆಘಾತಕಾರಿ ಘಟನೆ ನಡೆದಿದೆ.
18 ವರ್ಷದ ಯುವತಿಗೆ ಆಸ್ಪತ್ರೆಯ ಸಿಬ್ಬಂದಿ ಅಸಭ್ಯವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ. ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಬುಧವಾರ ಪ್ರಕರಣ ದಾಖಲಿಸಲಾಗಿದೆ.
ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಪಾಸಣೆಯ ನಂತರ ವೈದ್ಯರು ನೋವು ನಿವಾರಕ ನೀಡಿದ್ದು, ರಾತ್ರಿ 1 ಗಂಟೆ ವೇಳೆಗೆ ಶ್ಯಾಮ್ ಗುಜ್ಜರ್ ಎಂದು ಗುರುತಿಸಲಾದ ಸಿಬ್ಬಂದಿ ಅನುಚಿತವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ.
ಯುವತಿ ಎಚ್ಚರಗೊಂಡ ಸಂದರ್ಭದಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಯುವತಿ ಕುಟುಂಬದವರಿಗೆ ಮಾಹಿತಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು, ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.