ನವದೆಹಲಿ: ಕೋವಿಡ್ -19 ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆ ಇಲ್ಲವೆಂದು ಸಮೀಕ್ಷೆ ತಿಳಿಸಿದೆ.
ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ, ಕೋವಿಡ್ -19 ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುವ ಸಾಧ್ಯತೆ ಇಲ್ಲ ಎನ್ನುವುದು ಏಮ್ಸ್ ನಡೆಸಿದ ಸಮೀಕ್ಷೆಯೊಂದರಲ್ಲಿ ಗೊತ್ತಾಗಿದೆ. ಸಮೀಕ್ಷೆಯ ಪ್ರಕಾರ, ವಯಸ್ಕ ಜನಸಂಖ್ಯೆಗೆ ಹೋಲಿಸಿದರೆ ಮಕ್ಕಳಲ್ಲಿ ಸಿರೋಪಾಸಿಟಿವಿಟಿ ದರ ಹೆಚ್ಚಾಗಿದೆ. ಇದನ್ನು ಆಯ್ದ ರಾಜ್ಯಗಳಲ್ಲಿ ನಡೆಸಲಾದ ಸಮೀಕ್ಷೆಯಲ್ಲಿ ಕಂಡುಕೊಳ್ಳಲಾಗಿದೆ.
4500 ಡೇಟಾ ಪಡೆದುಕೊಳ್ಳಲಾಗಿದ್ದು, ಮುಂದಿನ ಎರಡು-ಮೂರು ತಿಂಗಳಲ್ಲಿ ಹೆಚ್ಚಿನ ಫಲಿತಾಂಶಗಳು ಬರುವ ಸಾಧ್ಯತೆ ಇದೆ. ಮುಂದಿನ ಕೆಲವು ವಾರ ಮತ್ತು ತಿಂಗಳುಗಳಲ್ಲಿ ಅಥವಾ ಮುಂದಿನ ಅಲೆಯಲ್ಲಿ ಮಕ್ಕಳ ಮೇಲೆ ಕೊರೋನಾ ವೈರಸ್ ನಿಂದ ಪರಿಣಾಮ ಉಂಟಾಗುತ್ತದೆ ಎಂದು ನಂಬಲು ಯಾವುದೇ ಕಾರಣವಿಲ್ಲವೆಂದು ಈ ಹಿಂದೆ ಕೇಂದ್ರ ಸರ್ಕಾರ ಹೇಳಿದೆ.
ಕೋವಿಡ್ ಕಾರ್ಯಪಡೆ ಅಧ್ಯಕ್ಷ ಡಾ. ಎನ್.ಕೆ. ಅರೋರಾ ಅವರು, ಪ್ರಸ್ತುತ ಪ್ರಸರಣಗೊಳ್ಳುತ್ತಿರುವ ವೈರಸ್ ತಳಿಗಳ ನಿರ್ದಿಷ್ಟ ಮುನ್ಸೂಚನೆ ಅನುಸಾರ ಯುವಕರು ಅಥವಾ ಮಕ್ಕಳ ಮೇಲೆ ಪರಿಣಾಮ ಬೀರಬಹುದೆನ್ನುವುದನ್ನು ಭಾರತೀಯ ದತ್ತಾಂಶ ತೋರಿಸುವುದಿಲ್ಲ ಎಂದು ಹೇಳಿದ್ದಾರೆ.