alex Certify BIG NEWS: ಕೋವಿಡ್ ಸಕ್ರಿಯ ಪ್ರಕರಣ ಗಣನೀಯ ಇಳಿಕೆ; 73 ದಿನಗಳಲ್ಲಿ ಮೊದಲ ಬಾರಿ 8 ಲಕ್ಷಕ್ಕೂ ಕಡಿಮೆ ಆಕ್ಟಿವ್ ಕೇಸ್; 24 ಗಂಟೆಯಲ್ಲಿ 62,480 ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ಸಕ್ರಿಯ ಪ್ರಕರಣ ಗಣನೀಯ ಇಳಿಕೆ; 73 ದಿನಗಳಲ್ಲಿ ಮೊದಲ ಬಾರಿ 8 ಲಕ್ಷಕ್ಕೂ ಕಡಿಮೆ ಆಕ್ಟಿವ್ ಕೇಸ್; 24 ಗಂಟೆಯಲ್ಲಿ 62,480 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ಕೊರೊನಾ ಎರಡನೇ ಅಲೆ ಅಟ್ಟಹಾಸಕ್ಕೆ ಕೊಂಚ ಬ್ರೇಕ್ ಬಿದ್ದಿದ್ದು, ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 62,480 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,97,62,793ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1,587 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,83,490ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 7,98,656 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕಳೆದ 73ದಿನಗಳ ಬಳಿಕ ಇದೇ ಮೊದಲ ಬಾರಿ ಸಕ್ರಿಯ ಪ್ರಕರಣ 8 ಲಕ್ಷಕ್ಕಿಂತ ಕಡಿಮೆಯಾಗಿದೆ. 2,85,80,647 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 88,977 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 26,89,60,399 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...