ಕೋಲಾರ: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವಿನ ವಾಕ್ಸಮರ ಮತ್ತೆ ಮುಂದುವರೆದಿದೆ. ಸಿದ್ದರಾಮಯ್ಯ 400-500 ಕೋಟಿ ಲೂಟಿ ಮಾಡಿದ್ದಾರೆ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
BIG NEWS: ನಿಷ್ಕ್ರಿಯ ರಾಜ್ಯ ಸರ್ಕಾರವನ್ನು ವಜಾಗೊಳಿಸಿ; ರಾಜ್ಯಪಾಲರನ್ನು ಒತ್ತಾಯಿಸಿದ ಸಿದ್ದರಾಮಯ್ಯ
ಕೋಲಾರದಲ್ಲಿ ಮಾತನಾಡಿದ ಹೆಚ್.ಡಿ. ಕುಮಾರಸ್ವಾಮಿ ಉಪಚುನಾವಣೆಯಲ್ಲಿ ಹಣ ಪಡೆದು ಬಿಜೆಪಿಯನ್ನು ಗೆಲ್ಲಿಸಿದ್ದೇವೆ ಎಂದು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪಕ್ಕೆ ತಿರುಗೇಟು ನೀಡಿದರು. ಸಿದ್ದರಾಮಯ್ಯ ಏನು ಮಹಾ ಹರಿಶ್ಚಂದ್ರನಾ? ಬೈ ಎಲೆಕ್ಷಣ್ ನಲ್ಲಿ ಬಿಜೆಪಿ ಗೆಲ್ಲಿಸಲು ಅವರೇ ಹಣ ಪಡೆದಿದ್ದಾರೆ. 2008ರಲ್ಲಿ ಯಡಿಯೂರಪ್ಪನವರಿಂದ ಹಣ ಪಡೆದಿದ್ದಾರೆ. ಈ ವಿಚಾರವನ್ನು ಸಿದ್ದರಾಮಯ್ಯ ಆಪ್ತರೇ ಹೇಳಿದ್ದಾರೆ ಎಂದರು.
ವಿರೋಧಿ ಬಣಕ್ಕೆ ಟಾಂಗ್ ನೀಡಿದ ಬಿ ಎಸ್ ವೈ; ಹೆಚ್.ವಿಶ್ವನಾಥ್ ಗೂ ಪರೋಕ್ಷ ಎಚ್ಚರಿಕೆ ಕೊಟ್ಟ ಸಿಎಂ
ಬೆಂಗಳೂರಿನಲ್ಲಿ 450 ಎಕರೆ ಭೂ ಹಗರಣ ಮಾಡಿದ್ದಾರೆ. ಕೆಂಪಣ್ಣ ಆಯೋಗ ಮಾಡಿ 400-500 ಕೋಟಿ ಲೂಟಿ ಮಾಡಿದರು. ಸಿದ್ದರಾಮಯ್ಯನವರು ನಾಲಿಗೆ ಬಿಗಿ ಹಿಡಿದು ಮಾತನಾಡಬೇಕು. ನಾನು ಅವರಿಂದ ಕಲಿಯಬೇಕಿಲ್ಲ ಎಂದು ವಾಗ್ದಾಳಿ ನಡೆಸಿದರು.