ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮತ್ತೆ ಬದಲಾವಣೆ ಮಾಡಲಾಗಿದೆ. ಗ್ರೇಡ್ ಬದಲು ಅಂಕಗಳನ್ನೇ ಪರಿಗಣಿಸಲು ಪಿಯು ಬೋರ್ಡ್ ನಿರ್ಧರಿಸಿರುವುದಾಗಿ ಪದವಿಪೂರ್ವ ಇಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಮಾಹಿತಿ ನೀಡಿದ್ದಾರೆ.
ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಗ್ರೇಡ್ ನಿಡಲು ನಿರ್ಧರಿಸಲಾಗಿತ್ತು. ಆದರೆ ಗ್ರೇಡ್ ಬದಲು ಮತ್ತೆ ಅಂಕ ನೀಡಲು ತೀರ್ಮಾನಿಸಲಾಗಿದೆ. ಗ್ರೇಡಿಂಗ್ ನೀಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ. ಉದ್ಯೋಗ ಪಡೆಯುವ ಸಂದರ್ಭದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಲಿದೆ. ಹೀಗಾಗಿ ಹಳೇ ಪದ್ಧತಿಯನ್ನೇ ಅನುಸರಿಸಿ ಅಂಕಗಳನ್ನು ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಚೊಚ್ಚಲ ಪಂದ್ಯದಲ್ಲೇ ದಾಖಲೆಯ ಮೇಲೆ ದಾಖಲೆ ಬರೆದ ಭಾರತೀಯ ಆಟಗಾರ್ತಿ ಶಫಾಲಿ
ಜೂನ್ ಕೊನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಕೂಡ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.