alex Certify ಗಮನಿಸಿ…! ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಮುಂದಿನ ಎರಡು ದಿನ ಭಾರೀ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಆರ್ಭಟ ಮುಂದುವರೆದಿದ್ದು, ಮುಂದಿನ ಎರಡು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಹೆಚ್ಚಿನ ಮಳೆಯಾಗಲಿದೆ. ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಈ ಅವಧಿಯಲ್ಲಿ ಹೆಚ್ಚಿನ ಮಳೆಯಾಗಲಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...