alex Certify GOOD NEWS: ಇನ್ನಷ್ಟು ಇಳಿಕೆಯಾದ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 97,743 ಜನರು ಡಿಸ್ಚಾರ್ಜ್; ಹೊಸದಾಗಿ ಪತ್ತೆಯಾದ ಕೋವಿಡ್ ಕೇಸ್ ಗಳೆಷ್ಟು ಗೊತ್ತೇ? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಇನ್ನಷ್ಟು ಇಳಿಕೆಯಾದ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 97,743 ಜನರು ಡಿಸ್ಚಾರ್ಜ್; ಹೊಸದಾಗಿ ಪತ್ತೆಯಾದ ಕೋವಿಡ್ ಕೇಸ್ ಗಳೆಷ್ಟು ಗೊತ್ತೇ?

ನವದೆಹಲಿ: ಕೊರೊನಾ ಎರಡನೇ ಅಲೆ ಆರ್ಭಟ ಕೊಂಚ ತಣ್ಣಗಾಗಿದ್ದು, ಪಾಸಿಟಿವಿಟಿ ರೇಟ್ ಕಡಿಮೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 60,753 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,98,23,546ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1,647 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,85,137ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 7,60,019ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,86,78,390 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 97,743 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ನಿನ್ನೆ ಒಂದೇ ದಿನ 19,02,009 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 38,92,07,637 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 26,89,60,399 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...