ಮಡಿಕೇರಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು, ನದಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಭೂ ಕುಸಿತದಂತಹ ಅವಘಡಗಳು ಸಂಭವಿಸುತ್ತಿವೆ. ಈ ನಡುವೆ ಜೀಪ್ ಒಂದು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಸೇತುವೆ ಮೇಲಿಂದ ತುಂಬಿ ಹರಿಯುತ್ತಿದ್ದ ಹೊಳೆಗೆ ಬಿದ್ದ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆಯ ಹುದೇಕೇರಿಯಲ್ಲಿ ನಡೆದಿದೆ.
ಕೆ.ಬಾಡಗ ಗ್ರಾಮದ ನಿವಾಸಿ ನೆಲ್ಲಿರ ಅಯ್ಯಪ್ಪ ಕೆಲಸದ ನಿಮಿತ್ತ ಪೊನ್ನಂಪೇಟೆಗೆ ಹೋಗಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಜೀಪ್ ನಿಯಂತ್ರಣ ಕಳೆದುಕೊಂಡು ಸೇತುವೆ ಮೇಲಿಂದ ಹೊಳೆಗೆ ಬಿದ್ದಿದೆ. ಹುದಕೇರಿ ಸಮೀಪದ ತಾಳೆ ತೋಟದ ಬಳಿ ಈ ದುರ್ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಚಾಲಕ ಅಯ್ಯಪ್ಪ ಪ್ರಾಣಾಪಾಯದಿಂದ ಪಾರಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ರಾಷ್ಟ್ರೀಯ ಹೆದ್ದಾರಿ 766 ಸಿ ಕುಸಿತ ಸಂಭವ, ಸಂಚಾರ ನಿಷೇಧ – ಪರ್ಯಾಯ ಮಾರ್ಗದಲ್ಲಿ ವ್ಯವಸ್ಥೆ
ನಿನ್ನೆಯಿಂದ ಜಿಲ್ಲೆಯಲ್ಲಿ ಮಳೆ ತಗ್ಗಿದ್ದು, ಹೊಳೆಯಲ್ಲಿ ನೀರಿನ ಮಟ್ಟ ಕೊಂಚ ಇಳಿಕೆಯಾಗಿತ್ತು. ಹಾಗಾಗಿ ಸ್ಥಳೀಯರ ನೆರವಿನಿಂದ ಕ್ರೇನ್ ಮೂಲಕ ಜೀಪನ್ನು ಹೊಳೆಯಿಂದ ಮೇಲಕ್ಕೆತ್ತಲಾಗಿದೆ.