alex Certify ನಾಳೆಯಿಂದಲೇ ಅನ್ ಲಾಕ್: ಎಲ್ಲ ಅಂಗಡಿ ಓಪನ್, ಚಟುವಟಿಕೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಳೆಯಿಂದಲೇ ಅನ್ ಲಾಕ್: ಎಲ್ಲ ಅಂಗಡಿ ಓಪನ್, ಚಟುವಟಿಕೆ ಆರಂಭ

ಬೆಂಗಳೂರು: 16 ಜಿಲ್ಲೆಗಳಲ್ಲಿ ಕಳೆದ ಒಂದು ವಾರದಲ್ಲಿ ಶೇಕಡ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಈ ಪಾಸಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.

ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ (ಬಿ.ಬಿ.ಎಂ.ಪಿ ಸೇರಿದಂತೆ), ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ ಜಿಲ್ಲೆಗಳಿಗೆ ಈ ಕೆಳಕಂಡ ಸಡಿಲಿಕೆಗಳನ್ನು ನೀಡಲಾಗಿದೆ.

ಎಲ್ಲಾ ಅಂಗಡಿಗಳನ್ನು ಸಂಜೆ 5.00 ಗಂಟೆವರೆಗೆ ತೆರೆಯಲು ಅನುವು ಮಾಡಿಕೊಡಲಾಗುವುದು.

ಎಸಿ. ಚಾಲನೆಗೊಳಿಸದೇ ಹೋಟೆಲ್‌, ಕ್ಲಬ್ಸ್‌, ರೆಸ್ಟೋರೆಂಟ್‌ಗಳಲ್ಲಿ (ಮದ್ಯಪಾನ ಹೊರತುಪಡಿಸಿ) ಕುಳಿತು ತಿನ್ನಲು ಸಂಜೆ 5.00 ಗಂಟೆವರೆಗೆ  ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ಮಾಡಿಕೊಡಲಾಗುವುದು.

ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ.

ಬಸ್‌ ಮತ್ತು ಮೆಟ್ರೋ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಣೆಗೆ ಅವಕಾಶ ನೀಡಿದೆ.

ಹೊರಾಂಗಣ ಕ್ರೀಡೆಗಳಿಗೆ, ವೀಕ್ಷಕರಿಲ್ಲದೇ ಅನುಮತಿ ನೀಡಲಾಗಿದೆ.

ಸರ್ಕಾರಿ/ಖಾಸಗಿ ಕಛೇರಿಗಳಿಗೆ ಶೇ 50 ರ ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲು ಅನುಮತಿಸಿದೆ.

ಲಾಡ್ಜ್‌ ಗಳಲ್ಲಿ ಮತ್ತು ರೆಸಾರ್ಟ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ ಅವಕಾಶ ನೀಡಲಾಗಿದೆ.

ಜಿಮ್‌ ಗಳಲ್ಲಿ ಶೇ 50 ಸಾಮರ್ಥ್ಯದೊಂದಿಗೆ (ಹವಾ ನಿಯಂತ್ರಣ ಇಲ್ಲದೇ) ಅವಕಾಶ ನೀಡಿದೆ.

ಶೇ. 5 ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ 13 ಜಿಲ್ಲೆಗಳಾದ ಹಾಸನ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಿಗೆ ದಿನಾಂಕ: 11-06-2021 ಆದೇಶದಲ್ಲಿ ನೀಡಿರುವ ಸಡಿಲಿಕೆಗಳು ಮಾತ್ರ ಅನ್ವಯಿಸುತ್ತವೆ.

ಶೇ. 10 ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ದರ ಇರುವ ಮೈಸೂರು ಜಿಲ್ಲೆಯಲ್ಲಿ ಯಥಾಸ್ಥಿತಿ ನಿರ್ಬಂಧಗಳು ಮುಂದುವರೆಯುವುದು.

ರಾಜ್ಯವ್ಯಾಪಿ ಅನ್ವಯವಾಗುವಂತೆ:

ಪ್ರತಿ ದಿನ ನೈಟ್‌ ಕರ್ಫ್ಯೂ ರಾತ್ರಿ 07.00 ಗಂಟೆಯಿಂದ ಬೆಳಗ್ಗೆ 05 ಗಂಟೆವರೆಗೆ ಇರುತ್ತದೆ.

ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 07.00 ಗಂಟೆಯಿಂದ ಸೋಮವಾರ ಬೆಳಿಗ್ಗ 05.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.

ನಿರ್ಬಂಧ:

ಈಜುಕೊಳ, ಸಭೆ ಸಮಾರಂಭ, ರಾಜಕೀಯ ಸಭೆ, ಕ್ರೀಡೆ, ಶಿಕ್ಷಣ ಸಂಸ್ಥೆ, ಸಿನಿಮಾ ಮಂದಿರ, ಶಾಪಿಂಗ್ ಮಾಲ್,  ಪಬ್, ಅಮ್ಯೂಸ್ ಮೆಂಟ್ ಪಾರ್ಕ್

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...