ಬೆಂಗಳೂರು: 54 ದಿನಗಳ ನಂತರ ರಾಜ್ಯದ 17 ಜಿಲ್ಲೆಗಳಲ್ಲಿ ಜನಜೀವನ ಸಹಜತೆಗೆ ಮರಳುತ್ತಿದೆ. ಇಂದಿನಿಂದ 17 ಜಿಲ್ಲೆಗಳು ಅನ್ಲಾಕ್ ಆಗಲಿದ್ದು, ಸಾರಿಗೆ ಸಂಚಾರ ಶುರುವಾಗಲಿದೆ.
ಬೆಳಿಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಎಲ್ಲಾ ಅಂಗಡಿ ತೆರೆಯಲು ಅವಕಾಶ ನೀಡಲಾಗಿದ್ದು, ಶೇಕಡ 50 ರಷ್ಟು ಸಾಮರ್ಥ್ಯದೊಂದಿಗೆ ಬಸ್ ಹಾಗೂ ಮೆಟ್ರೋ ಸಂಚಾರ ಶುರುವಾಗಲಿದೆ. ಕೊರೋನಾ ನಿಯಂತ್ರಣಕ್ಕೆ ಬಾರದ 12 ಜಿಲ್ಲೆಗಳಲ್ಲಿ ನಿರ್ಬಂಧ ಮುಂದುವರೆದಿದ್ದು, ಮೈಸೂರು ಜಿಲ್ಲೆಯಲ್ಲಿ ಲಾಕ್ ಡೌನ್ ಯಥಾಸ್ಥಿತಿಯಲ್ಲಿದೆ.
ಪ್ರತಿ ದಿನ ಸಂಜೆ 7 ರಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಇರುತ್ತದೆ. ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 7 ರಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.