ನವದೆಹಲಿ: ಭಾರತದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟ ತಣ್ಣಗಾಗುತ್ತಿದ್ದು, ಕಳೆದ 88 ದಿನಗಳ ಬಳಿಕ ದಾಖಲೆಯ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗಿರುವುದು ಸಮಾಧಾನಕರ ಸಂಗತಿ. ಕಳೆದ 24 ಗಂಟೆಯಲ್ಲಿ 53,256 ಜನರಲ್ಲಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,99,35,221ಕ್ಕೆ ಏರಿಕೆಯಾಗಿದೆ.
ಸಾವಿನ ಸಂಖ್ಯೆಯಲ್ಲಿಯೂ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1422 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,88,135ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 7,02,887 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 2,88,44,199 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 78,190 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ 13,88,699 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 39,24,07,782 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 28,00,36,898 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.