ಮುಂಬೈ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳುವ ಮೂಲಕ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
BIG NEWS: ಇಂದಿನಿಂದ ಉಚಿತ ಲಸಿಕೆ; ವದಂತಿಗಳಿಗೆ ಕಿವಿಗೊಡಬೇಡಿ ಎಂದ ಸಿಎಂ
ಮಹಾರಾಷ್ಟ್ರದ ಮಹಾ ವಿಕಾಸ ಅಘಾಡಿ ಸರ್ಕಾರದಲ್ಲಿ ಬಿರುಕು ಮುಡಿರುವ ಬೆನ್ನಲ್ಲೇ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರತ್ಯೇಕವಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದರು. ಇದರ ಬೆನ್ನಲ್ಲೇ ಶಿವಸೇನೆ ಮತ್ತೆ ಬಿಜೆಪಿಯೊಂದಿಗೆ ಹೊಂದಾಣಿಕೆ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದೆ ಎಂಬ ಚರ್ಚೆ ಆರಂಭವಾಗಿತ್ತು. ಇದೀಗ ಗೊಂದಲಗಳಿಗೆ ತೆರೆ ಎಳೆದಿರುವ ದೇವೇಂದ್ರ ಫಡ್ನವೀಸ್, ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ರೈಲ್ವೆ ದುರಂತದಲ್ಲಿ ಮೃತ ಪಟ್ಟಿದ್ದನೆನ್ನಲಾದ ವ್ಯಕ್ತಿ 11 ವರ್ಷಗಳ ನಂತ್ರ ಜೀವಂತವಾಗಿ ಪತ್ತೆ…!
ಶಿವಸೇನೆ ವಿರುದ್ಧ ವಾಗ್ದಾಳಿ ನಡೆಸಿದ ಫಡ್ನವೀಸ್, ಈಗಿನ ಮಹಾ ವಿಕಾಸ್ ಅಘಾಡಿಯಲ್ಲಿರುವ ಪಕ್ಷಗಳು ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಾರೆ? ಯಾರಿಗೆ ಚಪ್ಪಲಿ ಎಸೆಯುತ್ತಾರೆ? ಯಾರಿಗೆ ಹಾರ ಹಾಕುತ್ತಾರೆ ಎಂಬುದು ಅವರಿಗೆ ಬಿಟ್ಟದ್ದು, ಆದರೆ ಬಿಜೆಪಿ ಮಾತ್ರ ಮುಂಬರುವ ಚುನಾವಣೆಗಳಲ್ಲಿ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.