ಹುಬ್ಬಳ್ಳಿ: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಿ ನಾಯಕತ್ವ ಬದಲಾವಣೆ ಕುರಿತ ಬಹಿರಂಗ ಹೇಳಿಕೆಗಳಿಗೆ ಕಡಿವಾಣ ಹಾಕಿ ಹೋದರೂ, ತೆರೆಮರೆಯಲ್ಲಿ ಮತ್ತೆ ಸಿಎಂ ಬದಲಾವಣೆ ಪ್ರಯತ್ನಗಳು ಮುಂದುವರೆದಿದೆ ಎನ್ನಲಾಗುತ್ತಿದೆ. ಇದೀಗ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ನೀಡಿರುವ ಹೇಳಿಕೆ ಕುತೂಹಕ್ಕೆ ಕಾರಣವಾಗಿದೆ.
ನಾನು ಅರುಣ್ ಸಿಂಗ್ ಅವರನ್ನು ಭೇಟಿಯಾಗಿ ಎಲ್ಲವನ್ನೂ ಚರ್ಚಿಸಿದ್ದೇನೆ. ಸಧ್ಯಕ್ಕೆ ಶಾಂತವಾಗಿದ್ದೇನೆ. ರಾಜಕೀಯದ ಬಗ್ಗೆ ಯಾವುದೇ ಮಾತುಗಳನ್ನಾಡಲ್ಲ ಎಂದು ಹೇಳಿದ್ದಾರೆ. ಅಲ್ಲದೇ ನಾಯಕತ್ವ ಬದಲಾವಣೆ ವಿಚಾರವಾಗಿ ಯಾರೂ ಬಹಿರಂಗವಾಗಿ ಮಾತನಾಡಬಾರದು ಎಂದು ಸೂಚಿಸಲಾಗಿದೆ. ಪಕ್ಷ ವಿರೋಧಿ ಕೆಲಸ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಹಾಗಾಗಿ ರಾಜಕೀಯದ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡಲ್ಲ ಎಂದರು.
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ; ಊಹಾಪೋಹಗಳಿಗೆ ತೆರೆ ಎಳೆದ ದೇವೇಂದ್ರ ಫಡ್ನವೀಸ್
ಇದೇ ವೇಳೆ ಫೋನ್ ಕದ್ದಾಲಿಕೆ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿಗಳನ್ನು ನೀಡಿದ್ದೇನೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ವಲ್ಪ ಸಮಯಾವಕಾಶ ಬೇಕಿದೆ ಎಂದು ಹೇಳಿದರು.