ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಲಾಕ್ ಡೌನ್ ನಿಯಮಗಳು ಮುಂದುವರೆದಿದ್ದರೂ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಈ ನಡುವೆ ಜಿಲ್ಲೆಯಲ್ಲಿ ಕೊರೊನಾ ಮೂರನೇ ಅಲೆ ಆತಂಕ ಆರಂಭವಾಗಿದ್ದು, 18 ವರ್ಷದೊಳಗಿನ ಮಕ್ಕಳಲ್ಲಿ ಸೋಂಕು ಹೆಚ್ಚುತ್ತಿದೆ.
ಕಳೆದ 10 ದಿನಗಳಲ್ಲಿ ಮೈಸೂರಿನಲ್ಲಿ 769 ಮಕ್ಕಳಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ದೊಡ್ಡಮಟ್ಟದ ಸಮಸ್ಯೆ ಕಂಡು ಬಂದಿಲ್ಲವಾದರೂ ಮಕ್ಕಳಲ್ಲಿ ಸೋಂಕು ಹರಡುತ್ತಾ ಹೋದಲ್ಲಿ ಮುಂದಿನ ದಿನಗಳಲ್ಲಿ ಅಪಾಯ ಕಟ್ಟಿಟ್ಟಬುತ್ತಿ ಎನ್ನಲಾಗಿದೆ.
ಬೈನಾಕುಲರ್ನಲ್ಲಿ ಪಂದ್ಯ ವೀಕ್ಷಿಸಿದ ರೋಹಿತ್ ಶರ್ಮಾ: ಟ್ವಿಟರ್ನಲ್ಲಿ ಟ್ರೋಲ್ಗಳ ಸುರಿಮಳೆ
ಕೊರೊನಾ ಮೊದಲ ಅಲೆಯಲ್ಲಿ 1,500 ಮಕ್ಕಳಿಗೆ ಕೊರೊನಾ ದೃಢಪಟ್ಟಿದೆ. ಇದೀಗ ಕಳೆದ ಮೂರು ತಿಂಗಳಲ್ಲಿ 3 ಸಾವಿರ ಮಕ್ಕಳಲ್ಲಿ ಸೋಂಕು ಪತ್ತೆಯಾಗಿದ್ದರೆ ಕೇವಲ ಹತ್ತು ದಿನಗಳಲ್ಲಿ 769 ಮಕ್ಕಳಲ್ಲಿ ಸೋಂಕು ಕಂಡುಬಂದಿದೆ. ಮೂರನೇ ಅಲೆ ಆತಂಕದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ.