ಬೆಂಗಳೂರು: ಕೃಷಿ ಕೋರ್ಸ್ ಗಳಿಗೆ ಸೇರುವ ರೈತರ ಮಕ್ಕಳ ಮೀಸಲಾತಿಯನ್ನು ಶೇಕಡ 40 ರಿಂದ 50 ರಷ್ಟು ಹೆಚ್ಚಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.
ಕೃಷಿಯ ಡಿಪ್ಲೋಮಾ, ಬಿಎಸ್ಸಿ ಮತ್ತು ತತ್ಸಮಾನ ಕೃಷಿ ಪದವಿ ಕೋರ್ಸ್ ಗಳ ಪ್ರವೇಶಾತಿಯಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರ ಮಕ್ಕಳಿಗೆ ಶೇಕಡ 40 ರಷ್ಟು ಮೀಸಲಾತಿಯನ್ನು 50 ರಷ್ಟು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದ ಕೃಷಿ ಕಾಲೇಜುಗಳಲ್ಲಿನ ಡಿಪ್ಲೊಮಾ ಮತ್ತು ಪದವಿ ಕೋರ್ಸುಗಳಲ್ಲಿ ರೈತರ ಮಕ್ಕಳಿಗೆ ಶೇಕಡ 10 ರಷ್ಟು ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಸಿಎಂ ಯಡಿಯೂರಪ್ಪ ಮಂಡಿಸಿದ ಬಜೆಟ್ ನಲ್ಲಿ ಈ ಬಗ್ಗೆ ಭರವಸೆ ನೀಡಲಾಗಿದ್ದು, ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ಸಿಎಂ ರೈತರ ಮಕ್ಕಳಿಗೆ ಸಿಹಿ ಸುದ್ದಿ ನೀಡಿದ್ದಾರೆ.