ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವದ ಬಗ್ಗೆ ಜಟಾಪಟಿ ನಡೆಯುತ್ತಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ದೆಹಲಿಗೆ ಭೇಟಿ ನೀಡಿ ರಾಹುಲ್ ಗಾಂಧಿಯನ್ನ ಭೇಟಿಯಾಗಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ರಾಹುಲ್ ಗಾಂಧಿ ಜೊತೆ 45 ನಿಮಿಷಗಳ ಕಾಲ ಚರ್ಚೆ ನಡೆಸಿ ಹೊರ ಬಂದ ಡಿ.ಕೆ. ಶಿವಕುಮಾರ್ ರಾಜಕೀಯದ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ ಅಂತಂದ್ರು.
ಇದು ರಾಜಕೀಯ ಮಾಡುವ ಸಮಯವಲ್ಲ. ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ. ಪಕ್ಷದ ವರಿಷ್ಠರನ್ನ ಭೇಟಿಯಾಗಿ ಅವರಿಗೆ ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆ ಬಗ್ಗೆ ಮಾತ್ರ ಮಾಹಿತಿ ನೀಡಿದ್ದೇನೆ. ಪಕ್ಷ ಸಂಘಟನೆ ಹಾಗೂ ವಿರೋಧ ಪಕ್ಷದ ವೈಫಲ್ಯಗಳ ಬಗ್ಗೆ ಮಾತ್ರ ಚರ್ಚೆ ಮಾಡಿದ್ದೇವೆ. ಇದು ರಾಜಕೀಯ ಮಾಡುವ ಸಮಯವಲ್ಲ. ಹೀಗಾಗಿ ರಾಜ್ಯದ ಯಾವುದೇ ನಾಯಕರ ಬಗ್ಗೆಯೂ ನಾನು ವರದಿ ನೀಡಿಲ್ಲ ಎಂದು ಹೇಳಿದ್ದಾರೆ.
ಆದರೆ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ರಾಹುಲ್ ಗಾಂಧಿ ಭೇಟಿಗೆ ಸಮಯಾವಕಾಶ ಕೇಳಿದ್ದಾರೆ ಎನ್ನಲಾಗಿದೆ. ಡಿಕೆಶಿ ರಾಹುಲ್ ಭೇಟಿ ಬೆನ್ನಲ್ಲೇ ಸಿದ್ದರಾಮಯ್ಯ ಕೂಡ ಇದೇ ಹಾದಿ ತುಳೀತಾ ಇರೋದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.