ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ವಿಚಾರವಾಗಿ ಜಟಾಪಟಿ ತಾರಕಕ್ಕೇರಿದ್ದು, ಹೈಕಮಾಂಡ್ ಸೂಚನೆ ನೀಡಿದರೂ ಒಳಜಗಳ ಮುಂದುವರೆದಿದೆ. ಈ ನಡುವೆ ‘ಸಿದ್ದರಾಮಯ್ಯನವರೇ ಮುಂದಿನ ಸಿಎಂ’ ಎಂಬ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನನಗೂ ಶಾಸಕರ ಹೇಳಿಕೆಗಳಿಗೂ ಸಂಬಂಧವಿಲ್ಲ ಎಂದು ಗರಂ ಆಗಿದ್ದಾರೆ.
ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಶಾಸಕರು ಹೇಳಿಕೆಗಳನ್ನು ನೀಡಿದರೆ ನಾನೇನೂ ಮಾಡಲು ಆಗಲ್ಲ. ನನಗೂ ಅವರ ಹೇಳಿಕೆಗೂ ಸಂಬಂಧವಿಲ್ಲ ಎಂದು ಹೇಳಿದರು. ಇದೇ ವೇಳೆ ಶಾಸಕರ ಮೇಲೆ ಸಿದ್ದರಾಮಯ್ಯ ಕ್ರಮ ಕೈಗೊಳ್ಳುತ್ತಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಅವರೇನಾದರೂ ಹೇಳಿದರೆ ನಾನೇನು ಮಾಡೋಕೆ ಆಗುತ್ತೆ ? ಯಾರು ಏನು ಬೇಕಾದರೂ ಹೇಳಲಿ ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದು ಹೇಳಿದರು.
GOOD NEWS: ಪದವಿ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್; ಸಿಎಂ BSY ಚಾಲನೆ
ಈ ನಡುವೆ, ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ವಿಚಾರ ಚರ್ಚೆ ಬೆನ್ನಲ್ಲೇ ಕೈ ನಾಯಕರಿಗೆ ಖಡಕ್ ಸೂಚನೆ ನೀಡುವಂತೆ ರಾಹುಲ್ ಗಾಂಧಿಯವರಿಗೆ ಕಾಂಗ್ರೆಸ್ ಹಿರಿಯ ನಾಯಕರು ಒತ್ತಾಯಿಸಿದ್ದಾರೆ ಎನ್ನಲಾಗಿದೆ.