alex Certify BIG NEWS: ಜುಲೈ 3ನೇ ವಾರದಲ್ಲಿ SSLC ಪರೀಕ್ಷೆ; ಎಸ್ಒಪಿ ಬಿಡುಗಡೆ; ಅನುಸರಿಸಬೇಕಾದ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜುಲೈ 3ನೇ ವಾರದಲ್ಲಿ SSLC ಪರೀಕ್ಷೆ; ಎಸ್ಒಪಿ ಬಿಡುಗಡೆ; ಅನುಸರಿಸಬೇಕಾದ ಕ್ರಮಗಳ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕು ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈನಲ್ಲಿ 3ನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಈ ಕುರಿತು ಪ್ರಾಮಾಣಿತ ಕಾರ್ಯಾಚರಣೆ ವಿಧಾನ- ಎಸ್ಒಪಿ ಬಿಡುಗಡೆ ಮಾಡಲಾಗಿದ್ದು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ರೂಪಿಸಿ ನೀಡಿದ ಎಸ್ಒಪಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ರವಾನಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಶಿಕ್ಷಕರು, ಸಿಬ್ಬಂದಿ ಮತ್ತು ಅಧಿಕಾರಿಗಳು ಜಿಲ್ಲಾಡಳಿತದ ಸಹಕಾರದಿಂದ ಕೋವಿಡ್ ಲಸಿಕೆ ಪಡೆಯಬೇಕೆಂದು ಎಸ್ಒಪಿಯಲ್ಲಿ ಸೂಚಿಸಲಾಗಿದೆ.

ಆರ್ಡರ್​ ಮಾಡದೆಯೇ ಮಹಿಳೆ ಮನೆಗೆ ಬಂತು ಅಮೆಜಾನ್​ನ 150ಕ್ಕೂ ಅಧಿಕ ಪಾರ್ಸೆಲ್​..!

ಎಸ್ಒಪಿಯಲ್ಲಿನ ಪ್ರಮುಖ ಅಂಶಗಳು-ಅನುಸರಿಸಬೇಕಾದ ಮಾರ್ಗಸೂಚಿ:

* ಪರೀಕ್ಷಾ ವೇಳೆಯೊಳಗೆ ಒಂದು ಡೋಸ್ ಲಸಿಕೆ ಕಡ್ಡಾಯ

* ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಒ ಪಿ ಅನುಷ್ಠಾನಗೊಳಿಸಲು ಮಾಡಿಕೊಂಡಿರುವ ಸಿದ್ಧತೆಗಳನ್ನು ಪರಿಶೀಲಿಸುವುದು ಡಿಸಿ, ಸಿಇಒ ಮತ್ತು ಎಸ್ ಪಿ ಜವಾಬ್ದಾರಿ

* ಪ್ರತಿದಿನವೂ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ಪರೀಕ್ಷೆ ನಂತರ ಪರೀಕ್ಷಾ ಕೇಂದ್ರ, ಕೊಠಡಿ, ಪೀಠೋಪಕರಣ ಮತ್ತು ಶೌಚಾಲಯಗಳ ಸ್ಯಾನಿಟೈಜೇಷನ್

* ಪರೀಕ್ಷಾ ಕೇಂದ್ರಕ್ಕೆ ಆಗಮನ ಮತ್ತು ನಿರ್ಗಮನ ಹಾಗೆಯೇ ಕೊಠಡಿ ಪ್ರವೇಶ ಸಮಯದಲ್ಲಿ ದೈಹಿಕ ಅಂತರ ಕಡ್ಡಾಯ

* ವಿದ್ಯಾರ್ಥಿಗಳ ಕೈಗೆ ಸ್ಯಾನಿಟೈಜ್ ಮಾಡುವುದು. ಒಂದು ಡೆಸ್ಕ್ ಗೆ ಒಬ್ಬ ಪರೀಕ್ಷಾರ್ಥಿಯಂತೆ ಪರೀಕ್ಷಾ ಕೊಠಡಿಯಲ್ಲಿ 12 ಮಕ್ಕಳಿಗೆ ಮಾತ್ರ ಅವಕಾಶ

* ಮನೆಯಿಂದ ನೀರಿನ ಬಾಟಲ್ ಮತ್ತು ಊಟದ ಡಬ್ಬಿ ತರುವುದಕ್ಕೆ ಅವಕಾಶ

* ಗ್ರಾಮೀಣ ವಿಭಾಗದ ಅಭ್ಯರ್ಥಿಗಳು ಸಾಧ್ಯವಾದಷ್ಟು ತಾಲೂಕು ಕೇಂದ್ರಗಳಿಗೆ ಹೋಗದಂತೆ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು

* ಕೆಮ್ಮು, ನೆಗಡಿ, ಜ್ವರ ಮೊದಲಾದುವುಗಳಿಂದ ಬಳಲುತ್ತಿರುವ ಅಭ್ಯರ್ಥಿಗಳಿಗಾಗಿ ಕನಿಷ್ಠ 2 ಕೊಠಡಿಗಳನ್ನು ವಿಶೇಷ ಕೊಠಡಿಗಳನ್ನಾಗಿ ಕಾಯ್ದಿರಿಸಬೇಕು

* ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ಯಾನರ್, ಪಲ್ಸ್ಆಕ್ಸಿಮೀಟರ್, ಪ್ರಥಮ ಚಿಕಿತ್ಸಾ ಪೆಟ್ಟಿಗೆ ಕಡ್ಡಾಯ

* ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಆರೋಗ್ಯ ಕೌಂಟರ್ ಗಳಲ್ಲೇ ಮಾಸ್ಕ್ ವಿತರಣೆ

* ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಪ್ರತಿ ತಾಲೂಕಿಗೊಂದು ತುರ್ತು ಚಿಕಿತ್ಸಾ ವಾಹನ ಮೀಸಲು

* ಅಗತ್ಯ ಬಿದ್ದರೆ ಸಿಬ್ಬಂದಿ ಫೇಸ್ ಶೀಲ್ಡ್

* ಗಡಿ ಭಾಗದ ಪರೀಕ್ಷಾ ಕೇಂದ್ರಗಳಿಗೆ ಹೊರ ರಾಜ್ಯದಿಂದ ಬರುವ ಪರೀಕ್ಷಾರ್ಥಿಗಳಿಗೆ ಅನುವಾಗುವಂತೆ ಪರೀಕ್ಷೆಗಳ ದಿವಸದಂದು ರಾಜ್ಯದ ಗಡಿ ಪ್ರವೇಶಕ್ಕೆ ಜಿಲ್ಲಾಡಳಿತದ ಸಮನ್ವಯದೊಂದಿಗೆ ಕ್ರಮ

* ಪರೀಕ್ಷಾರ್ಥಿಗಳಿಗೆ ಕೋವಿಡ್ ಪಾಸಿಟೀವ್ ಕಂಡು ಬಂದಿದ್ದರೆ ಅಂತಹ ಪರೀಕ್ಷಾರ್ಥಿಗೆ ತಾಲೂಕಿಗೊಂದು ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿ ಅಲ್ಲಿಯೇ ಪರೀಕ್ಷೆಗೆ ವ್ಯವಸ್ಥೆ

* ಕುಟುಂಬದಲ್ಲಿ ಯಾರಿಗಾದರೂ ಸೋಂಕು ತಗುಲಿದ್ದು, ಪರೀಕ್ಷಾರ್ಥಿ ಐಸೋಲೇಷನ್ ನಲ್ಲಿದ್ದರೆ ಅವರನ್ನು ತಪಾಸಣೆ ನಡೆಸಿ ಅನಾರೋಗ್ಯವಾಗಿರುವುದು ಕಂಡುಬಂದರೆ ಸಮೀಪದ ವಿದ್ಯಾರ್ಥಿ ಕೋವಿಡ್ ಕೇರ್ ಸೆಂಟರ್ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ

* ಕೋವಿಡ್ ಆರೈಕೆ ಕೇಂದ್ರದಲ್ಲಿ ಒಂದು ಅಂಬುಲೆನ್ಸ್ ವಾಹನ ಕಾಯ್ದಿರಿಕೆ

ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆ ರವಾನೆ, ಪರೀಕ್ಷೆ ನಂತರ ಒಎಂಆರ್ ಶೀಟ್ ಗಳ ರವಾನೆ ಕುರಿತು ನಿಗದಿತ ಸೂಚನೆಗಳನ್ನು ಒದಗಿಸಲಾಗಿದ್ದು, ಹಾಗೂ ಆರೋಗ್ಯಕರ ವಾತಾವರಣದಲ್ಲಿ ಪರೀಕ್ಷೆ ಯಶಸ್ಸಿಗೆ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಪರೀಕ್ಷೆಯನ್ನು ಸುಲಲಿತ ಹಾಗೂ ಆರೋಗ್ಯಕರ ಪರಿಸರದಲ್ಲಿ ನಡೆಸುವ ಸಲುವಾಗಿ ಜೂ. 28ರಂದು ಜಿಲ್ಲಾಧಿಕಾರಿಗಳು, ಜಿಪಂ ಸಿಇಒ, ಎಸ್.ಪಿ ಗಳು, ಡಿಎಚ್ಒ, ಖಜಾನಾಧಿಕಾರಿಗಳು ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಸೂಕ್ತ ಮಾರ್ಗದರ್ಶನ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...