ಸೌತಾಂಪ್ಟನ್ ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ಎರಡನೇ ಇನಿಂಗ್ಸ್ ನಲ್ಲಿ 170 ರನ್ ಗಳಿಗೆ ಆಲೌಟ್ ಆಗಿದ್ದು, ನ್ಯೂಜಿಲೆಂಡ್ ಗೆಲುವಿಗೆ ಕೇವಲ 139 ರನ್ ಗುರಿ ನೀಡಲಾಗಿದೆ.
ಕೊನೆಯ ದಿನವಾದ ಇಂದು 64 ರನ್ ಗೆ ಎರಡು ವಿಕೆಟ್ ಗಳಿಂದ ಇನಿಂಗ್ಸ್ ಆರಂಭಿಸಿದ ಭಾರತ 170 ರನ್ ಗಳಿಸುವಷ್ಟರಲ್ಲಿ ಎಲ್ಲ ವಿಕೆಟ್ ಕಳೆದುಕೊಂಡಿತು. ವಿರಾಟ್ ಕೊಹ್ಲಿ 13, ಪೂಜಾರ 15 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅಜಿಂಕ್ಯಾ ರಹಾನೆ 15 ರನ್ ಗಳಿಸಿದರು.
ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 217 ರನ್ ಗಳಿಸಿದ್ದು, ನ್ಯೂಜಿಲೆಂಡ್ 249 ರನ್ ಗಳಿಸಿತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ 170 ರನ್ ಗಳಿಸಿದ್ದು, ನ್ಯೂಜಿಲೆಂಡ್ ಗೆಲುವಿಗೆ 139 ರನ್ ಗುರಿ ನೀಡಲಾಗಿದೆ. ಭಾರತದ ಬೌಲರ್ ಗಳು ಜಾದು ಮಾಡಿದಲ್ಲಿ ಮಾತ್ರ ಗೆಲುವು ಸಾಧ್ಯವಾಗಲಿದೆ. ಇಲ್ಲದಿದ್ದರೆ ನ್ಯೂಜಿಲೆಂಡ್ ವಿಶ್ವ ಟೆಸ್ಟ್ ಚಾಂಪಿಯನ್ ಆಗಲಿದೆ.