ಕಲಬುರಗಿ: ಜುಲೈ ಅಥವಾ ಆಗಸ್ಟ್ ನಲ್ಲಿ ಕಲಬುರ್ಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಮಾಹಿತಿ ನೀಡಿದ್ದಾರೆ.
ಕಲಬುರ್ಗಿಯಲ್ಲಿ ಸಂಪುಟ ಸಭೆ ನಡೆಸಲು ಚಿಂತನೆ ನಡೆಸಿದ್ದು, ಈ ಕುರಿತಾಗಿ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ನಡೆಸಲಾಗುತ್ತದೆ. ಕಲಬುರ್ಗಿ ಜಿಲ್ಲೆಯ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಭರವಸೆ ಇದೆ ಎಂದು ಮುರುಗೇಶ್ ನಿರಾಣಿ ಹೇಳಿದ್ದಾರೆ.
ಈ ಹಿಂದೆಯೂ ಹಲವು ಬಾರಿ ಕಲ್ಬುರ್ಗಿಯಲ್ಲಿ ಸಂಪುಟ ಸಭೆ ನಡೆದಿದ್ದು, 2008 ರಿಂದ 13 ರವರೆಗೆ 5 ಬಾರಿ ಸಂಪುಟ ಸಭೆ ನಡೆಸಲಾಗಿತ್ತು. ಸಿದ್ದರಾಮಯ್ಯ ಕೂಡ ಒಮ್ಮೆ ಸಂಪುಟ ಸಭೆ ನಡೆಸಿದ್ದರು. ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಚರ್ಚಿಸಲು ಸಭೆ ನಡೆಸಲಾಗಿತ್ತು. ಆದರೆ, ಕಳೆದ 8 ವರ್ಷಗಳಿಂದ ಕಲ್ಗುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿರಲಿಲ್ಲ. ಹೀಗಾಗಿ ಮತ್ತೆ ಸಂಪುಟ ಸಭೆ ನಡೆಸುವ ಕುರಿತು ಚರ್ಚೆ ನಡೆದಿದೆ.