ಬೆಂಗಳೂರು: ಬಿಬಿಎಂಪಿ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆ ಪ್ರಕರಣ ಪ್ರಮುಖ ಆರೋಪಿಗಳಾದ ಪೀಟರ್ ಹಾಗೂ ಸೂರ್ಯ ಇಬ್ಬರೂ ಕೃತ್ಯದ ಬಳಿಕ ಪರಾರಿಯಾಗಿದ್ದರು. ಆರೋಪಿಗಳು ತಲೆಮರೆಸಿಕೊಂಡಿದ್ದ ಸ್ಥಳದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಸುಮನಹಳ್ಳಿ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ವೇಳೆ ಪೊಲೀಸರು ಆರೋಪಿಗಳಿಗೆ ಶರಣಾಗುವಂತೆ ಮೊದಲು ಸೂಚಿಸಿದ್ದಾರೆ. ಆದರೆ ಶರಣಾಗದ ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾರೆ.
ಶಾಲೆಯಲ್ಲಿ ನೀಡುವ ʼಬಸ್ಕಿʼ ಶಿಕ್ಷೆ ಹಿಂದಿದೆ ವೈಜ್ಞಾನಿಕ ಕಾರಣ
ಆರೋಪಿಗಳಾದ ಪೀಟರ್ ಹಾಗೂ ಸೂರ್ಯ ತಪ್ಪಿಸಿಕೊಳ್ಳಲು ಮುಂದಾಗುತ್ತಿದ್ದಂತೆಯೇ ತಕ್ಷಣ ಪೊಲೀಸರು ಆರೋಪಿಗಳ ಕಾಲಿಗೆ ಗುಂಡೇಟು ಹೊಡೆದು ಇಬ್ಬರನ್ನು ಬಂಧಿಸಿದ್ದಾರೆ.