ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಬೆನ್ನಲ್ಲೇ ಡೆಲ್ಟಾ ಪ್ಲಸ್ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಿದೆ. ಈ ನಡುವೆ ಮತ್ತೆ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಇದೀಗ ರಾಜಧಾನಿ ಬೆಂಗಳೂರಿನಲ್ಲಿ ಬ್ಲ್ಯಾಕ್, ಗ್ರೀನ್ ಮಿಶ್ರಿತ ಫಂಗಸ್ ಪತ್ತೆಯಾಗಿದೆ.
ಮಹಿಳಾವಾದಿಗೆ ವರ ಬೇಕಾಗಿದ್ದಾನೆ..! ಇಲ್ಲಿದೆ ಜಾಹೀರಾತಿನ ಹಿಂದಿನ ಅಸಲಿ ಸತ್ಯ
ಕೊರೊನಾದಿಂದ ಗುಣಮುಖರಾದ ವ್ಯಕ್ತಿಯೋರ್ವರಲ್ಲಿ ಬ್ಲ್ಯಾಕ್ ಹಾಗೂ ಗ್ರೀನ್ ಮಿಶ್ರಿತ ಫಂಗಸ್ ಪತ್ತೆಯಾಗಿದ್ದು, ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಿಜಿಎಸ್ ಗೆ ಶಿಫ್ಟ್ ಮಾಡಲಾಗಿದೆ ಎಂದು ಡಾ. ಪ್ರಶಾಂತ್ ರೆಡ್ಡಿ ತಿಳಿಸಿದ್ದಾರೆ.