alex Certify ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟ ಚೇತನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟ ಚೇತನ್

ಬೆಂಗಳೂರು: ಬ್ರಾಹ್ಮಣ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನಟ ಚೇತನ್ ಹೇಳಿಕೆ ಖಂಡಿಸಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಇದೀಗ ಸಚಿವ ಹೆಬ್ಬಾರ್ ತಮ್ಮ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ನಟ ಚೇತನ್ ಸಚಿವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ತಮ್ಮ ತೇಜೋವಧೆ ಮಾಡಲಾಗಿದೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿರುವ ನಟ ಚೇತನ್, ಶಿವರಾಮ್ ಹೆಬ್ಬಾರ್ ವಿರುದ್ಧ 1 ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ಪರಿಹಾರ ನೀಡಬೇಕು ಹಾಗೂ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಪ್ರಕರಣ ಸಂಬಂಧ ಸಿಟಿ ಸಿವಿಲ್ ಕೋರ್ಟ್, ಸಚಿವ ಹೆಬ್ಬಾರ್ ಅವರಿಗೆ ನೋಟಿಸ್ ನೀಡಿದ್ದು, ವಿಚಾರಣೆಯನ್ನು ಜುಲೈ 14ಕ್ಕೆ ಮುಂದೂಡಿದೆ.

ಇನ್ನು ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ನಟ ಚೇತನ್ ವಿರುದ್ಧ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿದ್ದು, ಎರಡು ಬಾರಿ ವಿಚಾರಣೆ ಎದುರಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...