ಬೆಂಗಳೂರು: ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 340 ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ.
ಜೂನ್ ಇಲ್ಲವೇ ಜುಲೈನಲ್ಲಿ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವಂತೆ ಸರ್ಕಾರ ಸೂಚಿಸಿದೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಈ ಕುರಿತಾಗಿ ಪತ್ರ ಬರೆದಿದ್ದಾರೆ.
ರಾಜ್ಯದ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿರುವ 340 ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪತ್ರ ಬರೆದಿದ್ದು, ವಿವಿಧ ವಿಶ್ವವಿದ್ಯಾಲಯಗಳ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಆನ್ಲೈನ್ ತರಗತಿ ನಡೆಯುತ್ತಿವೆ. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿ ಮಾಡಿ ಆದೇಶ ನೀಡುವಂತೆ ಸೂಚಿಸಲಾಗಿದೆ.