alex Certify GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ; ಸಾವಿನ ಸಂಖ್ಯೆಯಲ್ಲೂ ಭಾರಿ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ; ಸಾವಿನ ಸಂಖ್ಯೆಯಲ್ಲೂ ಭಾರಿ ಕುಸಿತ

ನವದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 46,148 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,02,79,331ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 979 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,96,730ಕ್ಕೆ ಏರಿಕೆಯಾಗಿದೆ.

ʼಮಳೆಗಾಲʼದಲ್ಲಿ ಕಾಡುವ ಸೊಳ್ಳೆಗೆ ಇಲ್ಲಿದೆ ಮನೆ ಮದ್ದು

ಇನ್ನು ದೇಶದಲ್ಲಿ 5,72,994 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ರಿಕವರಿ ರೇಟ್ 96.80%ಕ್ಕೆ ಏರಿಕೆಯಾಗಿದೆ. 2,93,09,607ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 58,578 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...