alex Certify ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ: ಭೀಕರ ರಸ್ತೆ ಅಪಘಾತದಲ್ಲಿ 12ಕ್ಕೂ ಅಧಿಕ ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಿಗ್ಗೆ ಜವರಾಯನ ಅಟ್ಟಹಾಸ: ಭೀಕರ ರಸ್ತೆ ಅಪಘಾತದಲ್ಲಿ 12ಕ್ಕೂ ಅಧಿಕ ಮಂದಿ ಸಾವು

ಮುರಾದಾಬಾದ್​ ಸಮೀಪವಿರುವ ದೆಹಲಿ – ಲಕ್ನೋ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಈ ದುರ್ಘಟನೆಯಲ್ಲಿ 12 ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಪಂಜಾಬ್​  ಹಾಗೂ  ಪಿಲಿಬೀತ್​​ ನಡುವೆ ಸಂಚರಿಸುತ್ತಿದ್ದ ಬಸ್,​​ ಟ್ರಕ್​ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಈ ದುರಂತದಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಅನ್ನೋದಕ್ಕೆ ಇನ್ನೂ ನಿಖರವಾದ ಮಾಹಿತಿ ತಿಳಿದುಬಂದಿಲ್ಲ. ಮುಂಜಾನೆ ಸುಮಾರು 6 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ.

ಘಟನೆಯಲ್ಲಿ ಗಾಯಗೊಂಡವರನ್ನ ಮುರಾದಾಬಾದ್​ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಅನೇಕ ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ. ಪ್ರತ್ಯಕ್ಷದರ್ಶಿಗಳು ನೀಡಿರುವ ಮಾಹಿತಿಯ ಪ್ರಕಾರ ಬಸ್​ನಲ್ಲಿ ಸುಮಾರು 50 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಡಿಸಿಎಂ ಟ್ರಕ್​ನಲ್ಲಿ 20 ರಿಂದ 25 ಮಂದಿ ಜನರು ಇದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಮುರಾಬಾದ್​ನ ಪಕವಾಡಾ ಠಾಣಾ ಪೊಲೀಸರು ಪರಿಶೀಲನೆ ಮುಂದುವರಿಸಿದ್ದಾರೆ.

ಟ್ರಕ್​ನಲ್ಲಿ ಪ್ರಯಾಣ ಮಾಡುತ್ತಿದ್ದ ಬಲರಾಮ್​ ಎಂಬಾತ ಘಟನೆಯ ಬಗ್ಗೆ ಮಾತನಾಡಿದ್ದು ಪೊಲೀಸರು ನಮ್ಮ ಚಾಲಕನಿಗೆ ಗಾಡಿ ನಿಲ್ಲಿಸುವಂತೆ ಸೂಚನೆ ನೀಡಿದ್ದರು. ನಾವು ಟ್ರಕ್​ನಲ್ಲಿ ಪ್ರಯಾಣ ಮಾಡುತ್ತಿದ್ದೆವು. ಟ್ರಕ್​ ನಿಲ್ಲಿಸುತ್ತಿದ್ದಂತೆಯೇ ಹಿಂಬದಿಯಿಂದ ಬಸ್​ ಬಂದು ಟ್ರಕ್​ಗೆ ಗುದ್ದಿದೆ. ಈ ದುರ್ಘಟನೆಯಲ್ಲಿ ನಮ್ಮ ಆಪ್ತರಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಮೃತರನ್ನ ಆಶಿಷ್​, ಸುರೇಶ್​ ಹಾಗೂ ನನ್ಹೆ ಎಂದು ಗುರುತಿಸಲಾಗಿದೆ. ಟ್ರಕ್​ನಲ್ಲಿದ್ದ ಇನ್ನೂ 20 ಮಂದಿ ಗಾಯಗೊಂಡಿದ್ದಾರೆ ಎಂದು ಹೇಳಿದ್ರು.

ಅಪಘಾತದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ನಗರ ಎಸಿಪಿ ಅಮಿತ್​ ಆನಂದ್​, ಅಪಘಾತದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಐವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟವರ ಸಂಖ್ಯೆ ಬಗ್ಗೆ ಅಧಿಕೃತ ಮಾಹಿತಿ ಈಗಲೇ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...