ಬೆಂಗಳೂರು: ಶಿಕ್ಷಕರ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಜೂನ್ 30 ಬುಧವಾರ ಪ್ರಕಟಗೊಳ್ಳಲಿದ್ದು, ಅದಿನಿಂದಲೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಬ್ಯಾಂಕ್ ಲೂಟಿ ಮಾಡಿದ ದುಡ್ಡಿನಲ್ಲಿ ಹೆತ್ತವರಿಗೆ ಉಡುಗೊರೆ..!
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಹಲವು ದಿನಗಳಿಂದ ನಿರೀಕ್ಷೆಯಲ್ಲಿದ್ದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದ್ದು, ಜೂನ್ 30ರಿಂದ ಅಧಿಸೂಚನೆ ಹೊರಡಿಸಲಾಗುತ್ತಿದೆ. ಶಿಕ್ಷಣ ಮಿತ್ರ ಆಪ್ ಮೂಲಕ ಆನ್ ಲೈನ್ ನಲ್ಲಿಯೇ ಕೌನ್ಸಲಿಂಗ್ ನಡೆಯಲಿದ್ದು, ಮನೆಯಲ್ಲಿಯೇ ಕುಳಿತು ಶಿಕ್ಷಕರು ಕೌನ್ಸೆಲಿಂಗ್ ನಲ್ಲಿ ಭಾಗಿಯಾಗಬಹುದು. ಸ್ಥಳ ಆಯ್ಕೆ ಬಗ್ಗೆಯೂ ಅವಕಾಶ ನೀಡಲಾಗುತ್ತಿದೆ ಎಂದು ಹೇಳಿದರು.