ಬೆಂಗಳೂರು: ಪದವಿ ಕಾಲೇಜಿನ 1242 ಸಹಾಯಕ ಪ್ರಾಧ್ಯಾಪಕರು ಮತ್ತು 310 ಪ್ರಾಂಶುಪಾಲರ ಹುದ್ದೆಗಳಿಗೆ ನೇರ ನೇಮಕಾತಿಗೆ ಸರ್ಕಾರ ಆದೇಶ ನೀಡಿದೆ.
ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರ ಅವರಿಗೆ ಪತ್ರ ಬರೆದಿದ್ದಾರೆ. ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಮತ್ತು ಸಹಾಯಕ ಪ್ರಾಧ್ಯಾಪಕರ ಉದ್ಯೋಗಗಳ ನೇಮಕಾತಿಗೆ ಆರ್ಥಿಕ ಇಲಾಖೆ ಸಹಮತಿಯೊಂದಿಗೆ ಪ್ರಕ್ರಿಯೆ ಆರಂಭಿಸಲು ಅನುಮತಿ ನೀಡಲಾಗಿದೆ ಎಂದು ಹೇಳಲಾಗಿದೆ.
ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ವರ್ಗದ ಪ್ರಾಧ್ಯಾಪಕರಿಗೆ 5 ವರ್ಷ ಒಂದೇ ಸ್ಥಳದಲ್ಲಿ ಮುಂದುವರೆಯಲು ಅವಕಾಶ ನೀಡಲಾಗಿದೆ.