alex Certify GOOD NEWS: ರಿಕವರಿ ರೇಟ್ ಶೇ.96.92ಕ್ಕೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ರಿಕವರಿ ರೇಟ್ ಶೇ.96.92ಕ್ಕೆ ಏರಿಕೆ; ಸಾವಿನ ಸಂಖ್ಯೆಯಲ್ಲೂ ಇಳಿಕೆ

ನವದೆಹಲಿ: ಭಾರತದಲ್ಲಿ ಕೊರೊನಾ ಆರ್ಭಟ ತಣ್ಣಗಾಗುತ್ತಿದ್ದು, ಸೋಂಕಿತರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 45,951 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,03,62,848ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 817 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,98,454ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 5,37,064 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ರಿಕವರಿ ರೇಟ್ 96.92%ಕ್ಕೆ ಏರಿಕೆಯಾಗಿದೆ. 2,94,27,330 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 60,729 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...