ಹಾಸನ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ. ಅವರು ಬಿಜೆಪಿಯಲ್ಲಿಯೇ ಇರುತ್ತಾರೆ ಎಂದು ಕಂದಾಯ ಸಚಿವ ಆರ್.ಅಶೋಕ್, ಜಾರಕಿಹೊಳಿ ಪರ ಬ್ಯಾಟಿಂಗ್ ಮಾಡಿದ್ದಾರೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರವಾಗಿ ಹಾಸನದಲ್ಲಿ ಮಾತನಾಡಿದ ಸಚಿವರು, ಬಿಜೆಪಿ ಸರ್ಕಾರ ಬರಲು ರಮೇಶ್ ಜಾರಕಿಹೊಳಿ ಪಾತ್ರ ಕೂಡ ಮಹತ್ವದ್ದಾಗಿದೆ. ಅವರ ತ್ಯಾಗದಿಂದಲೇ ಸರ್ಕಾರ ರಚನೆಯಾಗಿದೆ. ಹೀಗಿರುವಾಗ ಅವರು ರಾಜೀನಾಮೆ ಕೊಡುವ ಪ್ರಶ್ನೆ ಬರಲ್ಲ. ರಮೇಶ್ ಜಾರಕಿಹೊಳಿ ಬಿಜೆಪಿಯಲ್ಲಿಯೇ ಇರಲಿದ್ದಾರೆ ಈ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು.
CBSE 10 ನೇ ತರಗತಿ ಫಲಿತಾಂಶದ ನಿರೀಕ್ಷೆಯಲ್ಲಿರುವವರಿಗೆ ಇಲ್ಲಿದೆ ಮಹತ್ವದ ಮಾಹಿತಿ
ಇನ್ನು ರಮೇಶ್ ಜಾರಕಿಹೊಳಿಗೆ ಮಂತ್ರಿ ಸ್ಥಾನ ವಿಚಾರವಾಗಿ ಹೈಕಮಾಂಡ್ ನಿರ್ಧರಿಸಲಿದೆ. ಹೈಕಮಾಂಡ್ ಕೈಗೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ ಎಂದು ಹೇಳಿದರು.
ಈ ನಡುವೆ ದೆಹಲಿಗೆ ದೌಡಾಯಿಸಿರುವ ರಮೇಶ್ ಜಾರಕಿಹೊಳಿ ಮಂತ್ರಿ ಸ್ಥಾನಕ್ಕಾಗಿ ವರಿಷ್ಠರ ಮೇಲೆ ಒತ್ತಡ ಹೇರಲು ಮುಂದಾಗಿದ್ದು, ಇಂದು ಜೆ.ಪಿ.ನಡ್ಡಾ, ಅರುಣ್ ಸಿಂಗ್, ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ನಾಯಕರ ಭೇಟಿಯಾಗಿ ಚರ್ಚಿಸಲಿದ್ದಾರೆ ಎನ್ನಲಾಗಿದೆ.